
ಮಂಗಳೂರು , ಸೆ. 30: ದ. ಕ. ಜಿಲ್ಲಾ ಕಾರ್ಯ ನಿರತ ಪತ್ರಕರ್ತರ ಸಂಘದ ವತಿಯಿಂದ ಜಿಲ್ಲಾಡಳಿತ, ಜಿ. ಪಂ., ಮಂಗಳೂರು ಪೊಲೀಸ್ ಕಮಿಷನರೇಟ್, ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್, ಸಹ್ಯಾದ್ರಿ ಎಂಜಿನಿಯರಿಂಗ್ ಮತ್ತು ಮ್ಯಾನೇಜೆಂಟ್ ಕಾಲೇಜು ಹಾಗೂ ರೋಹನ್ ಕಾರ್ಪೋರೇಶನ್ ನೇತೃತ್ವದಲ್ಲಿ ಬ್ಯಾಂಡ್ ಮಂಗಳೂರು ಸೌಹಾರ್ದ ಕ್ರಿಕೆಟ್ ಪಂದ್ಯಾವಳಿ ಅ. 2ರಂದು ಬೆಳಗ್ಗೆ 9 ಗಂಟೆಗೆ ಅಡ್ಯಾರ್ ಸಹ್ಯಾದ್ರಿ ಕಾಲೇಜು ಮೈದಾನದಲ್ಲಿ ನಡೆಯಲಿದೆ. ಜಿಲ್ಲಾಧಿಕಾರಿಗಳ ತಂಡ, ಮಂಗಳೂರು ಪೊಲೀಸ್ ಆಯುಕ್ತರ ತಂಡ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ತಂಡ, ಜಿ. ಪಂ. ಮುಖ್ಯ ಕಾರ್ಯನಿರ್ವಹಣಾಧಿಕಾರಿ ತಂಡ, ಜಿಲ್ಲಾ ಕಾರ್ಯ ನಿರತ ಪತ್ರಕರ್ತರ ಸಂಘದ ಅಧ್ಯಕ್ಷರ ತಂಡ ಪಂದ್ಯಾವಳಿಯಲ್ಲಿ ಭಾಗವಹಿಸಲಿವೆ.ಈ ಕ್ರಿಕೆಟ್ ಪಂದ್ಯಾವಳಿಯನ್ನು ಜಿಲ್ಲಾಧಿಕಾರಿ ಮುಲೈ ಮುಗಿಲನ್ ಉದ್ಘಾಟಿಸಲಿದ್ದಾರೆ ಎಂದು ಪ್ರಧಾನ ಕಾರ್ಯದರ್ಶಿ ಜಿತೇಂದ್ರ ಕುಂದೇಶ್ವರ ಪ್ರಕಟನೆಯಲ್ಲಿ ತಿಳಿಸಿದ್ದಾರೆ.







