ಬಂಟ್ವಾಳ : ಮೆಲ್ಕಾರ್ – ಮುಡಿಪು ರಾಜ್ಯ ಹೆದ್ದಾರಿಯ ಸಜಿಪ ಮುನ್ನೂರು ಗ್ರಾಮದ ಮಾರ್ನಬೈಲು ಎಂಬಲ್ಲಿ ಬುಧವಾರ ಸಂಭವಿಸಿದ ರಸ್ತೆ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದ ದ್ವಿಚಕ್ರ ವಾಹನ ಸವಾರ ಚಿಕಿತ್ಸೆ ಫಲಕಾರಿಯಾಗದೆ ಗುರುವಾರ ಮೃತಪಟ್ಟಿದ್ದಾರೆ.

ಬರಿಮಾರು ನಿವಾಸಿ ಸರ್ಫ್ರಾಝ್ ( 33) ಮೃತಪಟ್ಟ ಯುವಕ. ಬೈಕ್ ಸವರಳಾಗಿದ್ದ ಸಹೋದರಿ ಜಾಸ್ಮೀನ್ (18) ಗಾಯಗೊಂಡಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಸರ್ಫ್ರಾಝ್ ವಿದ್ಯಾರ್ಥಿನಿಯಾಗಿರುವ ತಂಗಿ ಜಾಸ್ಮೀನ್ ರನ್ನು ಬುಧವಾರ ಬೆಳಗ್ಗೆ ದೇರಳಕಟ್ಟೆಯ ಕಾಲೇಜಿಗೆ ಸ್ಕೂಟರ್ ನಲ್ಲಿ ಕರೆದುಕೊಂಡು ಹೋಗುತ್ತಿದ್ದ ವೇಳೆ ಈ ಅಪಘಾತ ಸಂಭವಿಸಿದೆ.

ಮೆಲ್ಕಾರ್ ನಿಂದ ಮುಡಿಪು ಮಾರ್ಗವಾಗಿ ಮಾರ್ನಬೈಲು ತಲುಪಿದಾಗ ಇವರ ಸ್ಕೂಟರ್ ಗೆ ಎದುರಿನಿಂದ ಇಮ್ತಿಯಾಝ್ ಎಂಬಾತ ಚಲಾಯಿಸಿಕೊಂಡು ಬಂದ ಬೈಕ್ ಢಿಕ್ಕಿ ಹೊಡೆದಿತ್ತು. ಇದರಿಂದ ಸ್ಕೂಟರ್ ನಲ್ಲಿದ್ದ ರಸ್ತೆಗೆ ಎಸೆಯಲ್ಪಟ್ಟಿದ್ದರು.

ಗಾಯಾಳುಗಳನ್ನು ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಗಂಭೀರವಾಗಿ ಗಾಯಗೊಂಡಿದ್ದ ಸರ್ಫ್ರಾಝ್ ಚಿಕಿತ್ಸೆ ಫಲಕಾರಿಯಾಗದೆ ಗುರುವಾರ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ.

ಈ ಬಗ್ಗೆ ಬಂಟ್ವಾಳ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Leave a Reply

Your email address will not be published. Required fields are marked *

Join WhatsApp Group
error: Content is protected !!