ನವದೆಹಲಿ : ಪಕ್ಷದ ನಿಷ್ಠಾವಂತ ಕಾರ್ಯಕರ್ತ ಎನಿಸಿಕೊಂಡಿದ್ದ ಹಾಗೂ ಪ್ರಧಾನಿ ನರೇಂದ್ರ ಮೋದಿಗಾಗಿ ಸ್ವಂತ ದುಡ್ಡಿನಲ್ಲಿ ಮಂದಿರವನ್ನೇ ಕಟ್ಟಿಸಿ ಪ್ರತಿಮೆ ಅನಾವರಣಗೊಳಿಸಿದ್ದ ಕಾರ್ಯಕರ್ತ ಇದೀಗ ಪಕ್ಷವನ್ನೇ ತೊರೆದಿರುವ ಘಟನೆ ಮಹಾರಾಷ್ಟ್ರದ ಪುಣೆಯಲ್ಲಿ ನಡೆದಿದೆ.

ಬಿಜೆಪಿ ಕಾರ್ಯಕರ್ತರನಾಗಿದ್ದ ಮಯೂರ್ ಮುಂಡೆ ಎಂಬುವವರು ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡುವ ಮೂಲಕ ಪಾರ್ಟಿ ತೊರೆದಿದ್ದಾರೆ. ಬೇರೆ ಪಕ್ಷದಿಂದ ಬಿಜೆಪಿಗೆ ಬಂದವರಿಗೆ ಹೆಚ್ಚಿನ ಆದ್ಯತೆ ನೀಡಲಾಗುತ್ತಿದೆ. ನಮ್ಮಂತ ನಿಷ್ಠಾವಂತ ಕಾರ್ಯಕರ್ತರನ್ನು ಕಡೆಗಣಿಸುವ ಮೂಲಕ ನಮ್ಮ ಘನತೆಯನ್ನು ಕುಗ್ಗಿಸಲಾಗುತ್ತಿದೆ ಎಂದು ಪಕ್ಷದ ವಿರುದ್ಧವೇ ಮುಂಡೆ ಅಸಮಾಧಾನ ಹೊರೆ ಹಾಕಿದ್ದಾರೆ.

1.5 ಲಕ್ಷ ರೂಪಾಯಿ ವೆಚ್ಚದಲ್ಲಿ ಮಂದಿರಕಟ್ಟಿಸಿ ಅದರಲ್ಲಿ ಪ್ರಧಾನಿಯವರ ಪ್ರತಿಮೆಯನ್ನು ಮುಂಡೆ ಅನಾವರಣಗೊಳಿಸಿದ್ದರು. ಇದೀಗ ಪಕ್ಷಕ್ಕೆ ರಾಜೀನಾಮೆ ನೀಡಿದ ಬಳಿಕ ಹೈಕಮಾಂಡ್ ನಾಯಕರ ಸೂಚನೆಯಂತೆ ಮೋದಿ ಅವರ ಪ್ರತಿಮೆಯನ್ನು ತೆರವುಗೊಳಿಸಿದ್ದಾರೆ ಎಂದು ತಿಳಿದುಬಂದಿದೆ.

Leave a Reply

Your email address will not be published. Required fields are marked *

Join WhatsApp Group
error: Content is protected !!