ಇತ್ತೀಚೆಗೆ ಮಹಿಳಾ ನಿರ್ಮಾಪಕಿಯೊಬ್ಬರು ಯೂಟ್ಯೂಬರ್ ಹರ್ಷ ಸಾಯಿ ವಿರುದ್ಧ ಲೈಂಗಿಕ ಕಿರುಕುಳದ ಆರೋಪ ಹೊರಿಸಿ ಪ್ರಕರಣ ದಾಖಲಿಸಿದ್ದರು. ಹರ್ಷ ಸಾಯಿ ತನ್ನ ಮೇಲೆ ಬೆದರಿಕೆ ಮತ್ತು ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂದು ಆರೋಪಿಸಲಾಗಿತ್ತು.ಆದರೆ, ಪ್ರಕರಣ ದಾಖಲಾದಾಗಿನಿಂದ ಹರ್ಷ ಸಾಯಿ ನಾಪತ್ತೆಯಾಗಿದ್ದಾರೆ.

ಆರಂಭದಲ್ಲಿ ಅವರು ಮುಂಬೈನಲ್ಲಿದ್ದಾರೆ ಎಂದು ಭಾವಿಸಲಾಗಿತ್ತು ಆದರೆ ಅವರ ಬಗ್ಗೆ ಯಾವುದೇ ಮಾಹಿತಿ ಇರಲಿಲ್ಲ. ಅವರು ಪ್ರಕರಣದ ಬಗ್ಗೆ ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಮಾಡಿ ಕಣ್ಮರೆಯಾದರು. ಪೊಲೀಸರು ಈಗಾಗಲೇ ಹರ್ಷ ಸಾಯಿ ವಿರುದ್ಧ ಪ್ರಕರಣ ದಾಖಲಿಸಿದ್ದು, ಹೊಸ ಲುಕ್ ಔಟ್ ನೋಟಿಸ್ ಹೊರಡಿಸಿದ್ದಾರೆ.ಹರ್ಷ ಸಾಯಿ ತಲೆಮರೆಸಿಕೊಂಡಿರುವುದರಿಂದ ನರಸಿಂಗ್ ಪೊಲೀಸರು ಲುಕ್ ಔಟ್ ನೋಟಿಸ್ ಹೊರಡಿಸಿದ್ದಾರೆ. ಪೊಲೀಸರು ಹರ್ಷ ಸಾಯಿಗಾಗಿ ಹುಡುಕಾಟ ನಡೆಸುತ್ತಿದ್ದಾರೆ.

ತೆಲುಗಿನ ಖ್ಯಾತ ಯೂಟ್ಯೂಬರ್ ಹರ್ಷ ಸಾಯಿ ವಿರುದ್ಧ ಅತ್ಯಾಚಾರ ಆರೋಪ ಕೇಳಿ ಬಂದಿದೆ. ಮದುವೆ ಮಾಡಿಕೊಳ್ಳುವುದಾಗಿ ಅತ್ಯಾಚಾರವೆಸಗಿ ವಂಚಿಸಿದ್ದು, ಜೊತೆಗಿದ್ದ ವಿಡಿಯೋಗಳನ್ನು ತೋರಿಸಿ ಬ್ಲಾಕ್ಮೇಲ್ ಮಾಡುತ್ತಿದ್ದಾನೆ. ಅಲ್ಲದೇ ಎರಡು ಕೋಟಿ ಹಣ ಪಡೆದು ವಂಚನೆ ಮಾಡಿದ್ದಾನೆ ಎಂದು ಯುವತಿ ದೂರು ನೀಡಿದ್ದಾರೆ.

ಹರ್ಷ ಸಾಯಿ ವಿರುದ್ಧ ನಾರಸಿಂಗಿ ಪೊಲೀಸ್ ಠಾಣೆಯಲ್ಲಿ ಯುವತಿ ದೂರು ದಾಖಲಿಸಿದ್ದಾರೆ. ಮದುವೆಯಾಗುವ ನೆಪದಲ್ಲಿ ಹರ್ಷ ಸಾಯಿ ತನ್ನಿಂದ 2 ಕೋಟಿ ರೂಪಾಯಿ ಪಡೆದು ವಂಚಿಸಿದ್ದಾರೆ. ಅತ್ಯಾಚಾರ ಎಸಗಿ ವಿಡಿಯೋ ಮಾಡಿ ಬ್ಲಾಕ್ ಮೇಲ್ ಮಾಡಿದ್ದಾಗಿ ಎಂದು ಯುವತಿ ಹೇಳಿಕೊಂಡಿದ್ದು, ಹರ್ಷ ಹಾಗೂ ಆತನ ತಂದೆ ರಾಧಾ ಕೃಷ್ಣ ವಿರುದ್ಧ ದೂರು ದಾಖಲಿಸಿದ್ದಾಳೆ.

Leave a Reply

Your email address will not be published. Required fields are marked *

Join WhatsApp Group
error: Content is protected !!