ಮಂಗಳೂರು : ಮಾಜಿ ಶಾಸಕ ಮೊಯಿದ್ದೀನ್ ಬಾವಾ ಸೋದರ ಮುಮ್ತಾಜ್ ಅಲಿ ನಾಪತ್ತೆಯಾಗಿದ್ದು (Missing), ಮಂಗಳೂರಿನ (Mangalore) ಕುಳೂರಿನ ಸೇತುವೆ (Bridge) ಮೇಲೆ ಮುಮ್ತಾಜ್ (mumtaz) ಅವರ KA19 MG0004 ಸಂಖ್ಯೆಯ BMW X5 ಕಾರು ಪತ್ತೆಯಾಗಿದ್ದು, ಈ ಕುರಿತು ಅವರ ಕುಟುಂಬಸ್ಥರು ತೀವ್ರ ಆತಂಕ ವ್ಯಕ್ತಪಡಿಸಿದ್ದಾರೆ.

ಸದ್ಯ ಅವರ ನಾಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಗ್ ಟ್ವಿಸ್ಟ್ ಒಂದು ಸಿಕ್ಕಿದೆ. ಈ ನಾಪತ್ತೆ ಪ್ರಕರಣದಲ್ಲಿ ಮಹಿಳೆ (Women) ಕೈವಾಡವಿದೆ ಎಂದು ಹೇಳಲಾಗುತ್ತಿದೆ.

ಮಹಿಳೆಯ ಕೈವಾಡ ಶಂಕೆ

ಮಾಜಿ ಶಾಸಕ ಮೊಯಿದ್ದೀನ್ ಬಾವಾ ಸಹೋದರ ಮಿಸ್ಸಿಂಗ್ ಪ್ರಕರಣಕ್ಕೆ ಸಂಬಂಧಿಸಿದಂತೆ ಅವರು ವೈಯಕ್ತಿಕ ಕಾರಣಕ್ಕೆ ಆತ್ಮಹತ್ಯೆ ಶಂಕೆ ವ್ಯಕ್ತವಾಗಿದೆ. ಈ ಪ್ರಕರಣದ ಹಿಂದೆ ಮಹಿಳೆಯ ಕೈವಾಡವಿದೆ ಎಂದು ಶಂಕೆ ವ್ಯಕ್ತವಾಗಿದೆ. ಮಹಿಳೆಯ ಬ್ಲಾಕ್‌ ಮೇಲ್ ಗೆ ಹೆದರಿ ಮುಮ್ತಾಜ್ ಅಲಿ ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂದು ಹೇಳಲಾಗುತ್ತಿದೆ. ಮಹಿಳೆಗೆ ಕೆಲವು ಪುರುಷರು ಕೂಡ ಸಹಾಯ ಮಾಡಿದ್ದಾರೆ ಎಂದು ಹೇಳಲಾಗುತ್ತಿದೆ. ಮರ್ಯಾದೆಗೆ ಅಂಜಿ ನಾಪತ್ತೆಯಾಗಿದ್ದಾರೆ ಎಂದು ಹೇಳಲಾಗುತ್ತಿದೆ. ಈ ಕುರಿತು ಎಲ್ಲಾ ಆಯಾಮದಿಂದಲೂ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ಮಹಿಳೆ ಜೊತೆ ಮುಮ್ತಾಜ್ ಅಲಿ ಸಂಪರ್ಕ

ಮಾಜಿ ಶಾಸಕ ಮೊಯಿದ್ದೀನ್ ಬಾವಾ ಸಹೋದರ ಮಿಸ್ಸಿಂಗ್ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ಚುರುಕುಗೊಳಿಸಿರುವ ಮಂಗಳೂರು ಪೊಲೀಸರು, ಮುಮ್ತಾಜ್ ಆಲಿಗೆ ಮಹಿಳೆ ಜೊತೆ ಸಂಪರ್ಕ ಶಂಕೆ ವ್ಯಕ್ತಪಡಿಸಿದ್ದಾರೆ. ಮಾತ್ರವಲ್ಲ ಈಗಾಗಲೇ ಮಹಿಳೆಯ ಕುರಿತು ಮಾಹಿತಿ ಕಲೆ ಹಾಕುತ್ತಿದ್ದಾರೆ.

ಕೇರಳದಲ್ಲಿ ಮಹಿಳೆ ಲಾಸ್ಟ್ ಲೊಕೇಶನ್

ಮಹಿಳೆಯ ಲಾಸ್ಟ್ ಲೋಕೇಶನ್ ಕೇರಳದಲ್ಲಿ ಪತ್ತೆಯಾಗಿದ್ದು, ಬಳಿಕ ಮಹಿಳೆಯ ಮೊಬೈಲ್ ಸ್ವಿಚ್ ಆಫ್ ಆಗಿದೆ. ಇನ್ನೊಂದೆಡೆ ಮೊಯಿದ್ದೀನ್ ಬಾವಾ ಸಹೋದರನಿಗಾಗಿ ನದಿಯಲ್ಲಿ ನಿರಂತರ ಹುಡುಕಾಟ ನಡೆಸಿದರೂ ಕೂಡ ಅವರು ಇನ್ನೂ ಪತ್ತೆಯಾಗಿಲ್ಲ. ಮುಮ್ತಾಜ್ ಸಿಕ್ಕ ಬಳಿಕ ಮಹಿಳೆಯನ್ನು ವಶಕ್ಕೆ ಪಡೆಯಲು ಪೊಲೀಸರ ತಂತ್ರ ರೂಪಿಸಿದ್ದಾರೆ.

ವಿವಿಧ ಉದ್ಯಮಿಗಳಲ್ಲಿ ತೊಡಗಿಸಿಕೊಂಡಿದ್ದ ಅಲಿ

ಇಂದು ಬೆಳಗ್ಗೆ ಮೂರು ಗಂಟೆಗೆ ವೇಳೆಗೆ ಮುಮ್ತಾಜ್ ಅಲಿ ಮನೆಯಿಂದ ಹೊರಟ್ಟಿದ್ದು, ಬೆಳಗ್ಗೆ 5 ಗಂಟೆಗೆ ಕುಳೂರು ಸೇತುವೆ ಮೇಲೆ ಮುಮ್ತಾಜ್ ಕಾರು ಪತ್ತೆಯಾಗಿತ್ತು. ಡ್ಯಾಮೇಜ್ ಆದ ಸ್ಥಿತಿಯಲ್ಲಿ ಮುಮ್ತಾಜ್ ಬಿಎಂಡಬ್ಲೂ ಕಾರು ಪತ್ತೆಯಾಗಿದೆ. ನಾಪತ್ತೆಯಾಗಿರುವ ಮಮ್ತಾಜ್ ಆಲಿ ವಿವಿಧ ಉದ್ಯಮ ಮತ್ತು ಮಸೀದಿ ಕಮಿಟಿಗಳಲ್ಲಿ ತೊಡಗಿಸಿಕೊಂಡಿದ್ದರಂತೆ. ಸ್ಥಳಕ್ಕೆ ಆಗಮಿಸಿದ ಕಮಿಷನರ್ ಎದುರು ಮೊಯಿದ್ದೀನ್ ಬಾವ ಕಣ್ಣೀರು ಹಾಕಿ ಸಹಾಯ ಮಾಡಿ ಎಂದು ಮನವಿ ಮಾಡಿದ್ದಾರೆ.

Leave a Reply

Your email address will not be published. Required fields are marked *

Join WhatsApp Group
error: Content is protected !!