ಬೆಂಗಳೂರು : ರಾಜ್ಯದ ವಿವಿಧೆಡೆ ಎರಡು ದಿನ ಬಾರಿ ಮಳೆ ಆಗುವ ಸಾಧ್ಯತೆಯಿದ್ದು, ಸೋಮವಾರ 7 ಜಿಲ್ಲೆಗಳಿಗೆ, ಮಂಗಳವಾರ 17 ಜಿಲ್ಲೆಗಳಿಗೆ ಹವಾಮಾನ ಇಲಾಖೆಯಿಂದ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

ಕರಾವಳಿಯ ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ, ಮಲೆನಾಡು ಹಾಗೂ ದಕ್ಷಿಣ ಒಳನಾಡಿನ ಚಿಕ್ಕಮಗಳೂರು, ಹಾಸನ, ಕೊಡಗು, ಮೈಸೂರು ಜಿಲ್ಲೆಗಳಿಗೆ ಸೋಮವಾರ ಯೆಲ್ಲೋ ಅಲರ್ಟ್ ನೀಡಲಾಗಿದ್ದು, ಈ ಜಿಲ್ಲೆಗಳ ಹಲವು ಕಡೆ ಗುಡುಗು ಸಹಿತ ಭಾರೀ ಮಳೆಯಾಗುವ ಸಂಭವವಿದೆ.

ದಕ್ಷಿಣ ಒಳನಾಡು ಹಾಗೂ ಉತ್ತರ ಒಳನಾಡಿನ ಕೆಲವು ಕಡೆಗಳಲ್ಲಿ ಗುಡುಗು ಸಹಿತ ಸಾಧಾರಣ ಮಳೆ ಆಗುವ ಸಂಭವ ಇದೆ.

ಕರಾವಳಿ ಹಾಗೂ ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಮಂಗಳವಾರ ಭಾರಿ ಮಳೆ ಆಗುವ ಸಂಭವ ಇದೆ. ಬಳ್ಳಾರಿ, ದಾವಣಗೆರೆ, ಚಿತ್ರದುರ್ಗ, ತುಮಕೂರು, ರಾಮನಗರ, ಮಂಡ್ಯ, ಚಾಮರಾಜನಗರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ ಜಿಲ್ಲೆಗಳಲ್ಲಿ ಮಂಗಳವಾರ ಹೆಚ್ಚಿನ ಮಳೆಯಾಗುವ ಸಂಭವ ಇದೆ.

Leave a Reply

Your email address will not be published. Required fields are marked *

Join WhatsApp Group
error: Content is protected !!