
ಬೆಂಗಳೂರು : ತಂದೆಯಿಲ್ಲದ ಮಕ್ಕಳ ಖಾತೆಗೆ ವರ್ಷಕ್ಕೆ 24,000 ರೂಪಾಯಿಯನ್ನು ಸ್ಕಾಲರ್ ಶಿಪ್ ರೂಪದಲ್ಲಿ ನೀಡಲಾಗುತ್ತಿದ್ದು, ಈ ಸೌಲಭ್ಯಕ್ಕಾಗಿ ಅರ್ಜಿ ಆಹ್ವಾನಿಸಲಾಗಿದೆ ಎಂಬ ಅನಧಿಕೃತ ಪ್ರಕಟಣೆಯ ಪ್ರತಿಯೊಂದು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ.
ಇದು ಸಂಪೂರ್ಣವಾಗಿ ಸುಳ್ಳು ಸುದ್ದಿಯಾಗಿದೆ ಎಂದು ಜಿಲ್ಲಾಡಳಿತ ಸ್ಪಷ್ಟಪಡಿಸಿದೆ.
ಅಧಿಕೃತ ಸಹಿ ಇಲ್ಲದ ಅರ್ಜಿಯು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವ ‘ಸುಳ್ಳು ಸುದ್ದಿ’ಯು ಸಾರ್ವಜನಿಕರನ್ನು ಗೊಂದಲಕ್ಕೀಡು ಮಾಡಿದೆ. ಸಾರ್ವಜನಿಕರು ವಿವಿಧ ಕಚೇರಿಗಳಿಗೆ ಅರ್ಜಿಗಾಗಿ ಅಲೆದಾಡುತ್ತಿರುವುದೂ ಕಂಡುಬಂದಿದೆ.
ಕೇಂದ್ರ ಪುರಸ್ಕೃತ ಪ್ರಾಯೋಜಕತ್ವದ ಯೋಜನೆಯು ಎಲ್ಲಾ ತಂದೆ ಇಲ್ಲದ ಮಕ್ಕಳಿಗೆ ಅನ್ವಯವಾಗುವುದಿಲ್ಲ. ಈ ಯೋಜನೆಯ ಬಗ್ಗೆ ಸರಿಯಾಗಿ ಅರಿತುಕೊಳ್ಳಬೇಕು. ಯೋಜನೆಯಲ್ಲಿ ಫಲಾನುಭವಿಯಾಗಲು ನಿರ್ದಿಷ್ಟ ಮಾನದಂಡಗಳು ಅನ್ವಯವಾಗಲಿವೆ ಎಂದು ಹೇಳಿದೆ.






