
ಮಂಗಳೂರು : ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಆರ್ ಆರ್ ನಗರ ಶಾಸಕ ಮುನಿರತ್ನ ವಿಚಾರವಾಗಿ ನೋಟಿಸ್ ಕೊಟ್ಟಿದ್ದೇವೆ. ಎಫ್ ಎಸ್ ಎಲ್ ವರದಿ ಬಳಿಕ ಶಾಸಕ ಸ್ಥಾನದ ರಾಜೀನಾಮೆ ಪಡೆಯುತ್ತೇವೆ. ಪಕ್ಷದಿಂದಲೂ ಉಚ್ಚಾಟನೆ ಮಾಡುತ್ತೇವೆ ಎಂದು ವಿಧಾನಸೌಧದಲ್ಲಿ ವಿರೋಧ ಪಕ್ಷದ ನಾಯಕ ಅಶೋಕ್ ಹೇಳಿಕೆ ನೀಡಿದರು.
ಜಾತಿಗಣತಿ ಹೇಳಿ ಮಾಡಿಸಿದ್ದಾರೆಂದು ನಿಮ್ಮ ಪಕ್ಷದವರೇ ಹೇಳುತ್ತಿದ್ದಾರೆ. ಡಿಕೆ ಶಿವಕುಮಾರ್, ಕೆ. ಸುಧಾಕರ್, ಶಾಮನೂರು ಶಿವಶಂಕರಪ್ಪ ವಿರೋಧ ಮಾಡುತ್ತಿದ್ದಾರೆ. ಲಿಂಗಾಯತ ಸಮುದಾಯದವರು ಕೂಡ ಸಿಎಂ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿದ್ದಾರೆ. ನಿಮ್ಮ ಗೊಂದಲಗಳನ್ನು ಬಿಜೆಪಿಯ ಮೇಲೆ ಹಾಕಬೇಡಿ ಎಂದು ವಿಧಾನಸೌಧದಲ್ಲಿ ಕಾಂಗ್ರೆಸ್ ವಿರುದ್ಧ ಆರ್ ಅಶೋಕ್ ವಾಗ್ದಾಳಿ ನಡೆಸಿದರು.
