
ಮಂಗಳೂರು: ಉದ್ಯಮಿ ಮುಮ್ತಾಝ್ ಅಲಿ ಅಸಹಜ ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಮುಖ ಆರೋಪಿ ಅಬ್ದುಲ್ ಸತ್ತಾರ್ ಸೇರಿ ಮೂವರನ್ನು ಮಂಗಳೂರಿನ ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.
ಆರೋಪಿಗಳಾದ ಅಬ್ದುಲ್ ಸತ್ತಾರ್, ಮುಸ್ತಫಾ ಮತ್ತು ಶಾಫಿ ಎಂಬವರನ್ನು ಬಂಧಿಸಿ ಕಾವೂರ್ ಪೊಲೀಸ್ ಠಾಣೆಯ ತನಿಖಾಧಿಕಾರಿ ಮುಂದೆ ಹಾಜರುಪಡಿಸಿರುವುದಾಗಿ ಕಾವೂರು ಪೊಲೀಸರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
