ಶಾಲೆಗಳು ದೇವಾಲಯವಿದ್ದಂತೆ. ಆದರೆ ಆಗಾಗ ಶಿಕ್ಷಕರು, ಸಿಬ್ಬಂದಿಗಳು ಮಾಡುವ ಕೆಲಸ ನಾಚಿಕೆಗೇಡಿನದ್ದಾಗಿರುತ್ತದೆ. ಇಲ್ಲೋರ್ವ ಶಿಕ್ಷಕಿ ಮಕ್ಕಳಿಂದ ಮಸಾಜ್ ಮಾಡಿಸಿಕೊಂಡ ವಿಡಿಯೋವೊಂದು ಸೋಶಿಯಲ್ ಮೀಡಿಯಾದಲ್ಲಿ ಹರಿದಾಡುತ್ತಿದೆ.

ಜೈಪುರದ ಸರ್ಕಾರಿ ಶಾಲೆಯಲ್ಲಿ ಈ ಘಟನೆ ನಡೆದಿದೆ.

ಶಿಕ್ಷಕಿಯೊಬ್ಬರು ನೆಲದ ಮೇಲೆ ಮಲಗಿದ್ದರೆ ವಿದ್ಯಾರ್ಥಿಗಳು ಅವರ ಕಾಲುಗಳನ್ನು ಒತ್ತಿ ಮಸಾಜ್ ಮಾಡುತ್ತಿದ್ದಾರೆ. ಈ ವೀಡಿಯೊ ಈಗ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದೆ.

ಈ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗುತ್ತಿದ್ದಂತೆ, ಸರ್ಕಾರಿ ಶಾಲೆಗಳ ಸ್ಥಿತಿಯ ಬಗ್ಗೆ ಕಳವಳ ವ್ಯಕ್ತಪಡಿಸಲಾಗಿದ್ದು, ಅನೇಕ ಶಿಕ್ಷಕರು ಘಟನೆಯ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ್ದಾರೆ.ಕರ್ತಾರ್ಪುರದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಚಿತ್ರೀಕರಿಸಲಾಗಿದೆ ಎನ್ನಲಾದ ವೀಡಿಯೊದಲ್ಲಿ, ಶಿಕ್ಷಕರು ತರಗತಿಯಲ್ಲಿ ಮಲಗಿದ್ದಾರೆ. ಮಕ್ಕಳು ಮಸಾಜ್ ಮಾಡುತ್ತಿದ್ದಾರೆ.

Leave a Reply

Your email address will not be published. Required fields are marked *

Join WhatsApp Group
error: Content is protected !!