
ದೆಹಲಿ ಅಕ್ಟೋಬರ್ 11: ದೆಹಲಿಯಿಂದ ಚೆನ್ನೈಗೆ ತೆರಳುತ್ತಿದ್ದ ವಿಮಾನದಲ್ಲಿ ನಾಚಿಕೆಗೇಡಿನ ವರ್ತನೆಯ ಪ್ರಕರಣ ಬೆಳಕಿಗೆ ಬಂದಿದೆ. ತನ್ನ ಎದುರಿನ ಸೀಟಿನಲ್ಲಿ ಕುಳಿತಿದ್ದ ಮಹಿಳಾ ಪ್ರಯಾಣಿಕಳನ್ನು ವ್ಯಕ್ತಿಯೊಬ್ಬ ಅನುಚಿತವಾಗಿ ಸ್ಪರ್ಶಿಸಿದ್ದಾನೆ ಎಂದು ಹೇಳಲಾಗುತ್ತಿದೆ.
ಈ ಪ್ರಕರಣದಲ್ಲಿ 43 ವರ್ಷದ ಪ್ರಯಾಣಿಕನನ್ನು ಬಂಧಿಸಲಾಗಿದೆ. ವರದಿ ಪ್ರಕಾರ ದೆಹಲಿ-ಚೆನ್ನೈ ಇಂಡಿಗೋ ವಿಮಾನದಲ್ಲಿ ಈ ನಾಚಿಕೆಗೇಡಿನ ಕೃತ್ಯ ನಡೆದಿದೆ.
ಆರೋಪಿಯನ್ನು ರಾಜೇಶ್ ಶರ್ಮಾ ಎಂದು ಗುರುತಿಸಲಾಗಿದೆ. ಈತ ಮಾರ್ಬಲ್ ಟೈಲ್ಸ್ ಲೇಯರ್ ಆಗಿದ್ದಾನೆ. ಅಕ್ಟೋಬರ್ 9ರಂದು ಚೆನ್ನೈ ವಿಮಾನ ನಿಲ್ದಾಣದಲ್ಲಿ ವಿಮಾನ ಲ್ಯಾಂಡ್ ಆದ ನಂತರ ಆತನನನ್ನು ಅಧಿಕಾರಿಗಳು ಬಂಧಿಸಿದ್ದಾರೆ. ಮಹಿಳೆ ಜೈಪುರ ಮತ್ತು ದೆಹಲಿ ಪ್ರವಾಸ ಮುಗಿಸಿ ಮನೆಗೆ ಹಿಂತಿರುಗುತ್ತಿದ್ದಾಗ ಈ ಘಟನೆ ನಡೆದಿದೆ.
ಮಲಗಿದ್ದ ಮಹಿಳೆಗೆ ಕಿರುಕುಳ
ಮೀನಂಬಾಕ್ಕಂ ವಿಮಾನ ನಿಲ್ದಾಣದ ಮಹಿಳಾ ಪೊಲೀಸ್ ಠಾಣೆಯ ಅಧಿಕಾರಿಯೊಬ್ಬರು ಈ ಬಗ್ಗೆ ಮಾಹಿತಿ ನೀಡಿದ್ದಾರೆ. ಪೊಲೀಸರ ಪ್ರಕಾರ ಮಹಿಳೆ ಪ್ರಯಾಣಿಕರೊಬ್ಬರು ದೂರು ನೀಡಿದ್ದಾರೆ.
ಫ್ಲೈಟ್‌ನಲ್ಲಿ ಕಿಟಕಿಯ ಸೀಟಿನಲ್ಲಿ ಕುಳಿತು ಮಲಗಿದ್ದಾಗ ಹಿಂದೆ ಕುಳಿತಿದ್ದ ವ್ಯಕ್ತಿ ಆಕೆಯನ್ನು ಅನುಚಿತವಾಗಿ ಸ್ಪರ್ಶಿಸಿದ್ದಾನೆ. ಈ ಆರೋಪಿಯೂ ಹಿಂಬದಿಯ ಕಿಟಕಿ ಸೀಟಿನ ಮೇಲೆ ಕುಳಿತಿದ್ದನು ಎಂದು ಮಹಿಳೆ ದೂರಿದ್ದಾರೆ.
ಆರೋಪಿ ಬಂಧನ
ಈ ಘಟನೆಯಿಂದಾಗಿ ಮಹಿಳೆ ಹೆದರಿದ್ದಾರೆ. ಸಂಜೆ 4.30ಕ್ಕೆ ವಿಮಾನ ಲ್ಯಾಂಡ್ ಆದ ಬಳಿಕ ಮಹಿಳೆ ಏರ್ ಲೈನ್ ಸಿಬ್ಬಂದಿಯ ಸಹಾಯದಿಂದ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಈ ಪ್ರಕರಣದಲ್ಲಿ ಭಾರತೀಯ ನ್ಯಾಯ ಸಂಹಿತೆ (ಬಿಎನ್‌ಎಸ್) ಸೆಕ್ಷನ್ 75 (ಲೈಂಗಿಕ ಕಿರುಕುಳ) ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದ್ದು ಆರೋಪಿಯನ್ನು ಬಂಧಿಸಲಾಗಿದೆ. ಆರೋಪಿಯ ಹೆಸರು ರಾಜೇಶ್ ಶರ್ಮಾ ಎಂದು ಗುರುತಿಸಲಾಗಿದೆ. ಆರೋಪಿಯು ರಾಜಸ್ಥಾನದ ನಿವಾಸಿ ಎಂದು ತಿಳಿದು ಬಂದಿದೆ. ಆದರೆ ಕಳೆದ ಕೆಲವು ವರ್ಷಗಳಿಂದ ಚೆನ್ನೈನಲ್ಲಿ ನೆಲೆಸಿದ್ದನು ಎಂದುವಿಚಾರಣೆಯಿಂದ ತಿಳಿದು ಬಂದಿದೆ.
