ಮಂಗಳೂರು : ಮಂಗಳೂರು ಧರ್ಮಕ್ಷೇತ್ರದ ಧರ್ಮಾಧ್ಯಕ್ಷರಾದ ಅತೀ ವಂದನೀಯ ಡಾ. ಪೀಟರ್ ಪಾವ್ಲ್ ಸಲ್ಡಾನ್ಹ ಕರ್ನಾಟಕ ಜೆಸ್ವಿಟ್ ಪ್ರಾಂತ್ಯದ ನಾಲ್ವರು ಉಪಯಾಜಕರಿಗೆ ಯಾಜಕರಾಗಿ ದೀಕ್ಷೆಯನ್ನು ನೀಡಿದರು.

ಮಂಗಳೂರಿನ ಫಾತಿಮಾ ಧ್ಯಾನ ಮಂದಿರದಲ್ಲಿ ಶನಿವಾರ ನಡೆದ ಸಮಾರಂಭದಲ್ಲಿ ವಂ.

ಮ್ಯಾಕ್ಸಿಮ್ ಮಾರ್ಟಿನ್ ಡಿಸೋಜ, ವಂ. ಜೋಸ್ವಿನ್ ಪಿರೇರಾ, ವಂ. ಕಿರಣ್ ಲೀಮಾ, ಹಾಗೂ ವಂ. ವಿಲ್ಸನ್ ಸಲ್ಡಾನ್ಹಾ ಗುರುದೀಕ್ಷೆ ಪಡೆದರು.

ಈ ಸಂದರ್ಭದಲ್ಲಿ ಮಾತನಾಡಿದ ವಂ. ಡಾ. ಪೀಟರ್ ಪಾವ್ಲ್ ಸಲ್ಡಾನ್ಹರವರು ದೀಕ್ಷೆ ಪಡೆದ ಧರ್ಮಗುರುಗಳು ಕ್ರಿಸ್ತನ ರಾಯಭಾರಿಗಾಗಿ ತಮ್ಮ ಜೀವನದಲ್ಲಿ ಕ್ರಿಸ್ತನು ಸಾರಿದ ಮೌಲ್ಯಗಳನ್ನು ಪ್ರತಿಬಿಂಬಿಸುವಂತೆ ಕರೆ ನೀಡಿದರು.

ಕರ್ನಾಟಕ ಜೆಸ್ವಿಟ್ ಪ್ರಾಂತ್ಯದ ಪ್ರಾಂತ್ಯಾಧಿಕಾರಿ ವಂ. ಸ್ವಾಮಿ ಡಯನೀಶಿಯಸ್ ವಾಸ್, ಫಾತಿಮಾ ಧ್ಯಾನ ಮಂದಿರದ ಮುಖ್ಯ ಗುರುಗಳಾದ ವಂ.ಸ್ವಾಮಿ ಅನಿಲ್ ಡಿ ಮೆಲ್ಲೊ ಹಾಗೂ ನೂರಕ್ಕೂ ಹೆಚ್ಚು ಗುರುಗಳು ಹಾಗೂ ಕನ್ಯಾಸ್ತ್ರೀಯರು ಹಾಜರಿದ್ದರು. ವಂ. ಸ್ವಾಮಿ ವಿಶ್ವಾಸ್ ಮಿಸ್ಕಿತ್‌ರವರು ಬಲಿಪೂಜೆಯ ನಿರ್ವಹಿಸಿದರು. ವಂ. ಸ್ವಾಮಿ ಲೆಸ್ಟನ್ ಲೋಬೊ ಕಾರ್ಯಕ್ರಮ ನಿರೂಪಿಸಿದರು.

Leave a Reply

Your email address will not be published. Required fields are marked *

Join WhatsApp Group
error: Content is protected !!