ಮುಂಬೈ : ನಗರದಲ್ಲಿ ಶನಿವಾರ(ಅ18) ರಾತ್ರಿ ಅಪರಿಚಿತ ದುಷ್ಕರ್ಮಿಗಳು ಗುಂಡಿನ ದಾಳಿ ನಡೆಸಿ ಎನ್‌ಸಿಪಿಯ ಹಿರಿಯ ನಾಯಕ ಬಾಬಾ ಸಿದ್ದಿಕಿ(66)ಅವರನ್ನು ಹತ್ಯೆಗೈದಿದ್ದಾರೆ. ಗುಂಡಿನ ದಾಳಿ ನಡೆದ ತತ್ ಕ್ಷಣ ಸಮೀಪದ ಲೀಲಾವತಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೆ ಬಾಬಾ ಸಿದ್ದಿಕಿ ಕೊನೆಯುಸಿರೆಳೆದಿದ್ದಾರೆ.

ಮಹಾರಾಷ್ಟ್ರ ಡಿಸಿಎಂ ಅಜಿತ್ ಪವಾರ್ ಅವರ NCP ಬಣದಲ್ಲಿ ಗುರುತಿಸಿಕೊಂಡಿದ್ದ ಬಾಬಾ ಸಿದ್ದಿಕಿ ಸಿನಿ ರಂಗದಲ್ಲಿ ಭಾರೀ ಪ್ರಭಾವ ಹೊಂದಿದ್ದ ನಾಯಕರಾಗಿದ್ದರು.

ವಂಡ್ರೆ ಪೂರ್ವದ ಶಾಸಕರಾಗಿರುವ ಅವರ ಪುತ್ರ ಜೀಶನ್ ಸಿದ್ದಿಕ್ ಅವರ ಕಚೇರಿ ಬಳಿ ಈ ಘಟನೆ ನಡೆದಿದೆ. ದಾಳಿಯ ವಿವರಗಳು ಅಸ್ಪಷ್ಟವಾಗಿದ್ದರೂ, ಕನಿಷ್ಠ ಮೂವರು ದಾಳಿಯಲ್ಲಿ ಭಾಗಿಯಾಗಿದ್ದಾರೆ ಎಂದು ಆರಂಭಿಕ ವರದಿಗಳು ಸೂಚಿಸಿವೆ.ಘಟನೆಗೆ ಸಂಬಂಧಿಸಿ ಇಬ್ಬರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಮುಂಬೈ ಪೊಲೀಸರು ಭಾರೀ ಕಾರ್ಯಾಚರಣೆ ನಡೆಸುತ್ತಿದ್ದಾರೆ.

ವಂಡ್ರೆ ಪಶ್ಚಿಮ ವಿಧಾನಸಭಾ ಕ್ಷೇತ್ರದಿಂಡಾ 1999, 2004 ಮತ್ತು 2009 ರಲ್ಲಿ ಸತತ ಮೂರು ಅವಧಿಗೆ ಶಾಸಕರಾಗಿದ್ದರು.2004-08 ಅವಧಿಗೆ ಆಹಾರ ಮತ್ತು ನಾಗರಿಕ ಸರಬರಾಜು, ಕಾರ್ಮಿಕ ಖಾತೆ ರಾಜ್ಯ ಸಚಿವರಾಗಿಯೂ ಸೇವೆ ಸಲ್ಲಿಸಿದ್ದರು. 1976 ರಿಂದ ಕಾಂಗ್ರೆಸ್ ಪಕ್ಷದಲ್ಲಿದ್ದ ಅವರು 2024 ರಲ್ಲಿ ಸೇರಿದ್ದರು.

ಜೀಶನ್ ಬಾಬಾ ಸಿದ್ದಿಕ್ ಕಾಂಗ್ರೆಸ್‌ನ ಶಾಸಕರಾಗಿದ್ದಾರೆ. ಮುಂಬೈ ಯುವ ಕಾಂಗ್ರೆಸ್ ಅಧ್ಯಕ್ಷರಾಗಿಯೂ ಕೆಲಸ ಮಾಡಿದ್ದರು.

Leave a Reply

Your email address will not be published. Required fields are marked *

Join WhatsApp Group
error: Content is protected !!