
ಮೂಡಿಗೆರೆ: ಚಾಲಕ ನಿಯಂತ್ರಣ ತಪ್ಪಿ ಜೀಪ್ ವೊಂದು ಪಲ್ಟಿಯಾಗಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಬಣಕಲ್‌ನ ಕೋಗಿಲೆ ಗ್ರಾಮದಲ್ಲಿ ನಡೆದಿದೆ.
ಚಾಲಕನ ನಿಯಂತ್ರಣ ತಪ್ಪಿ ಜೀಪ್ ಪಲ್ಟಿಯಾದ ಪರಿಣಾಮ ಜೀಪ್ ನಲ್ಲಿದ್ದ 3 ರಿಂದ 4 ಜನರಿಗೆ ಸಣ್ಣ ಪುಟ್ಟ ಗಾಯಗಳಾಗಿದ್ದು, ಆಸ್ಪತ್ರೆಗೆ ರವಾನಿಸಲಾಗಿದೆ.
ಬಣಕಲ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಗಾಯಾಳುಗಳಿಗೆ ಬಣಕಲ್ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಪ್ರಥಮ ಚಿಕಿತ್ಸೆ ನೀಡಲಾಯಿತು
