
ಪುತ್ತೂರು : ಆಟೋ ರಿಕ್ಷಾದಲ್ಲಿ ಅಕ್ರಮವಾಗಿ ಗೋ ಸಾಗಾಟ ನಡೆಸುತ್ತಿದ್ದುದ್ದನ್ನು ಬಜರಂಗದಳ ಕಾರ್ಯಕರ್ತರು ಪತ್ತೆ ಹಚ್ಚಿದ ಘಟನೆ ಪುತ್ತೂರಿನಲ್ಲಿ ನಡೆದಿದೆ.
ಪುತ್ತೂರು ಬೈಪಾಸ್ ರಸ್ತೆಯಲ್ಲಿ ತೆರಳುತ್ತಿದ್ದ ಆಟೋ ರಿಕ್ಷಾದಲ್ಲಿ ವ್ಯಕ್ತಿಯೋರ್ವ ಗೋ ಸಾಗಾಟ ಮಾಡುತ್ತಿರುವ ಬಗ್ಗೆ ಮಾಹಿತಿ ಬಂದ ಮೇರೆಗೆ ದಾಳಿ ನಡೆಸಿದ ಬಜರಂಗದಳ ಕಾರ್ಯಕರ್ತರು ದಾಳಿ ನಡೆಸಿದ್ದು, ಜಾನುವಾರು ಸಹಿತ ಆಟೋ ರಿಕ್ಷಾವನ್ನು ಪೊಲೀಸ್ ಠಾಣೆಗೆ ಒಪ್ಪಿಸಿದ್ದಾರೆ ಎಂದು ತಿಳಿದು ಬಂದಿದೆ.
ಆಟೋ ರಿಕ್ಷಾದಲ್ಲಿ ಮಹಿಳೆಯರು ಕೂಡ ಪ್ರಯಾಣಿಸುತ್ತಿದ್ದರು ಎನ್ನಲಾಗಿದ್ದು, ಅವರನ್ನು ಕೂಡ ಪೊಲೀಸರು ವಶಕ್ಕೆ ಪಡೆದಿದ್ದಾರೆ ಎಂದು ತಿಳಿದು ಬಂದಿದೆ.
