ಪುತ್ತೂರು: ವಿಶ್ವ ಹಿಂದೂ ಪರಿಷದ್ ನೂತನ ಕಾರ್ಯಾಲಯ ನಿರ್ಮಾಣವಾಗಲಿದ್ದು, ಇದರ ಅಂಗವಾಗಿ ಭೂಮಿ ಪೂಜೆ ಅ.23 ಬುಧವಾರ ಬೆಳಿಗ್ಗೆ 10 ಗಂಟೆಗೆ ನಡೆಯಲಿದೆ.

ಕುಕ್ಕೆ ಸುಬ್ರಹ್ಮಣ್ಯ ಮಠದ ಶ್ರೀ ವಿದ್ಯಾಪ್ರಸನ್ನ ತೀರ್ಥ ಸ್ವಾಮೀಜಿಯವರು ದಿವ್ಯ ಉಪಸ್ಥಿತರಿರುವರು. ಮುಖ್ಯ ಅತಿಥಿಯಾಗಿ ವಿಶ್ವ ಹಿಂದೂ ಪರಿಷದ್ ಕೇಂದ್ರೀಯ ಕಾರ್ಯದರ್ಶಿ ಗೋಪಾಲ್ ಜೀ ಪಾಲ್ಗೊಳ್ಳುವರು.

ವಿಶ್ವ ಹಿಂದೂ ಪರಿಷದ್ ಕರ್ನಾಟಕ ದಕ್ಷಿಣ ಪ್ರಾಂತ ಕಾರ್ಯಾಧ್ಯಕ್ಷ ಪ್ರೊ.ಎಂ.ಬಿ.ಪುರಾಣಿಕ್, ಕಾರ್ಯದರ್ಶಿ ಜಗನ್ನಾಥ ಶಾಸ್ತ್ರಿ ಗೌರವ ಉಪಸ್ಥಿತರಿರುವರು ಎಂದು ವಿಶ್ವ ಹಿಂದೂ ಪರಿಷದ್ ಪುತ್ತೂರು ಕಟ್ಟಡ ನಿರ್ಮಾಣ ಸಮಿತಿ ಅಧ್ಯಕ್ಷ ಯು.ಪೂವಪ್ಪ, ಕಾರ್ಯದರ್ಶಿ ಡಾ.ಕೃಷ್ಣಪ್ರಸನ್ನ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Leave a Reply

Your email address will not be published. Required fields are marked *

Join WhatsApp Group
error: Content is protected !!