ಹು ಬ್ಬಳ್ಳಿ: ಕೇಂದ್ರ ಸಚಿವ (Union Minister) ಪ್ರಹ್ಲಾದ್ ಜೋಶಿ (Prahlad Joshi) ಸಹೋದರ ಗೋಪಾಲ್ ಜೋಶಿ (Gopal Joshi) ವಿರುದ್ಧ ಗಂಭೀರ ಆರೋಪ ಕೇಳಿ ಬಂದಿದೆ. ಕಳೆದ ಬಾರಿಯ ಲೋಕಸಭಾ ಚುನಾವಣೆಗೆ (Loksabha Election) ಟಿಕೆಟ್ ಕೊಡಿಸುವುದಾಗಿ ನಂಬಿಸಿ 1 ಕೊಟಿ 75 ಲಕ್ಷ ಹಣ ಪಡೆದು ವಂಚನೆ ಎಸಗಿದ್ದಾರೆ ಅಂತ ಮಾಜಿ ಶಾಸಕ ದೇವಾನಂದ ಚೌಹಾಣ್ ಪತ್ನಿ ಸುನಿತಾ ಚೌಹಾಣ್ (Sunita Chauhan) ಎನ್ನುವವರು ದೂರು ನೀಡಿದ್ದರು.

ಇದೀಗ ಅವರನ್ನು ಬಂಧಿಸಿ ಹುಬ್ಬಳ್ಳಿಯ ಅವರ ನಿವಾಸ ಹಾಗೂ ಕಚೇರಿಯಲ್ಲಿ ಪೊಲೀಸರು ತಪಾಸಣೆ ನಡೆಸಿದ್ದಾರೆ.

ಮಹಾರಾಷ್ಟ್ರದ ಕೊಲ್ಲಾಪುರದಲ್ಲಿ ಗೋಪಾಲ್ ಜೋಶಿ ಅರೆಸ್ಟ್

ಬೆಂಗಳೂರಿನ ಬಸವೇಶ್ವರ ನಗರ ಠಾಣೆ ಪೊಲೀಸರು, ಗೋಪಾಲ್ ಜೋಶಿ ಅವರನ್ನು ಮಹಾರಾಷ್ಟ್ರದ ಕೊಲ್ಲಾಪುರದಲ್ಲಿ ಇಂದು ಬೆಳಿಗ್ಗೆ ಬಂಧಿಸಿ, ಹುಬ್ಬಳ್ಳಿಯ ಕೇಶ್ವಾಪುರ ಪೊಲೀಸ್ ಠಾಣೆಗೆ ಕರೆದೋಯ್ದರು. ಆ ಬಳಿಕ ಹುಬ್ಬಳ್ಳಿಯ ಇಂದಿರಾ ಕಾಲೋನಿಯಲ್ಲಿರುವ ಗೋಪಾಲ ಜೋಶಿ‌ ನಿವಾಸದಲ್ಲಿ ತಪಾಸನಣೆ ನಡೆಸಿದ್ದಾರೆ.

ಪುಣೆಯಲ್ಲಿ ಗೋಪಾಲ ಪುತ್ರನ ಬಂಧನ

ಗೋಪಾಲ್ ಜೋಶಿ ವಿರುದ್ಧ ಪ್ರಕರಣ ದಾಖಲಾಗುತ್ತಿದ್ದಂತೆ ತಲೆಮರೆಸಿಕೊಂಡಿದ್ದರು.

ಮಹಾರಾಷ್ಟ್ರದ ಕೊಲ್ಲಾಪುರದಲ್ಲಿ ಲಾಡ್ಜ್‌ನಲ್ಲಿ ಉಳಿದುಕೊಂಡಿದ್ದ ಅವರನ್ನು ಇಂದು ಬೆಳಗ್ಗೆ 5.30ಕ್ಕೆ ಲಾಡ್ಜ್ ಗೆ ತೆರಳಿ ಪೊಲೀಸರು ಬಂಧಿಸಿದ್ದಾರೆ. ಇನ್ನು ಅವರ ಪುತ್ರ ಅಜಯ್ ಜೋಷಿ ಅವರನ್ನು ಪುಣೆಯಲ್ಲಿ ಬಂಧಿಸಿ, ಇಬ್ಬರನ್ನು ಹುಬ್ಬಳ್ಳಿಗೆ ಕರೆದೊಯ್ದಿದ್ದಾರೆ.

ಪ್ರಕರಣದಲ್ಲಿ ನಾಲ್ವರ ಬಂಧನ

ಪ್ರಕರಣದ ತನಿಖೆ ನಡೆಸುತ್ತಿರುವ ಎಸಿಪಿ ಚಂದನ್ ನೇತೃತ್ವದಲ್ಲಿ ಆರೋಪಿಗಳಿಬ್ಬರನ್ನು ಹುಬ್ಬಳ್ಳಿ ಕಚೇರಿಗೆ ಕರೆದೊಯ್ದು ಮಹಜರು ನಡೆಸಿದ್ದಾರೆ. ನಿನ್ನೆಯೇ ಈ ಪ್ರಕರಣ ಸಂಬಂಧ ಇನ್ಜಿಬ್ಬರು ಆರೋಪಿಗಳನ್ನ ಬಂಧಿಸಲಾಗಿತ್ತು. ಸೋಮಶೇಖರ್ ನಾಯಕ್ ಹಾಗೂ ವಿಜಯಕುಮಾರಿ ಬಂಧಿತ ಆರೋಪಿಗಳು.. ಈ ಪ್ರಕರಣದಲ್ಲಿ ಒಟ್ಟು ನಾಲ್ವರ ಬಂಧನವಾಗಿದೆ.

ಪ್ರಕರಣದ ಬಗ್ಗೆ ಪ್ರಹ್ಲಾದ್ ಜೋಶಿ ಹೇಳಿದ್ದೇನು?

ಗೋಪಾಲ್ ಜೋಶಿ ಕೇಸ್‌ಗೂ, ನನಗೂ ಸಂಬಂಧವಿಲ್ಲ

ಪ್ರಕರಣದ ಬಗ್ಗೆ ಪ್ರತಿಕ್ರಿಯೆ ನೀಡಿದ ಪ್ರಹ್ಲಾದ್ ಜೋಶಿ, ಗೋಪಾಲ್ ಜೋಶಿ ತಪ್ಪು ಮಾಡಿದ್ದರೆ ಕಾನೂನು ಕ್ರಮವಾಗಲಿ. ಗೋಪಾಲ್ ಜೋಶಿ ಮೇಲಿನ ಪ್ರಕರಣಕ್ಕೂ ನನಗೂ ಯಾವುದೇ ಸಂಬಂಧವಿಲ್ಲ ಅಂತ ಪ್ರಹ್ಲಾದ್ ಜೋಶಿ ಹೇಳಿದ್ದಾರೆ.

ನನಗೆ ವಿಜಯಲಕ್ಷ್ಮಿ ಅಂತ ಯಾರೂ ಸಹೋದರಿ ಇಲ್ಲ

ನನಗೆ ಯಾರೂ ಸಹೋದರಿ ಇಲ್ಲ. ವಿಜಯಲಕ್ಷ್ಮಿ ಯಾರೆಂಬುದೇ ಗೊತ್ತಿಲ್ಲ. ನನ್ನ ತಾಯಿಗೆ ಗೋಪಾಲ್ ಜೋಶಿ ಸೇರಿ ನಾಲ್ವರು ಮಕ್ಕಳು ಇದ್ದೀವಿ ಅಂತ ಪ್ರಹ್ಲಾದ್ ಜೋಶಿ ಹೇಳಿದ್ದಾರೆ

Leave a Reply

Your email address will not be published. Required fields are marked *

Join WhatsApp Group
error: Content is protected !!