ತಮಿಳುನಾಡು : ತಮಿಳುನಾಡು ‘ನೀಟ್’ ಕೋಚಿಂಗ್ ಸೆಂಟರ್ ನಲ್ಲಿ ವಿದ್ಯಾರ್ಥಿಗಳಿಗೆ ಮನಬಂದಂತೆ ಕೋಲಿನಿಂದ ಹೊಡೆಯಲಾಗಿದೆ. ಕೋಚಿಂಗ್ ಸೆಂಟರ್ ಟ್ರೈನರ್ ಹಾಗೂ ಮಾಲೀಕನ ಹುಚ್ಚಾಟ ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ತಿರುನಲ್ವೇಲಿಯಲ್ಲಿ ಘಟನೆ ನಡೆದಿದ್ದು, ಕೋಲಿನಿಂದ ವಿದ್ಯಾರ್ಥಿಗಳಿಗೆ ಸಿಕ್ಕಾಪಟ್ಟೆ ಹೊಡೆಯಲಾಗಿದೆ.
ಯಾವುದೋ ಕ್ಷುಲ್ಲಕ ಕಾರಣಕ್ಕೆ ಹೊಡೆಯಲಾಗಿದ್ದು, ವಿದ್ಯಾರ್ಥಿಗಳನ್ನ ಸರತಿ ಸಾಲಿನಲ್ಲಿ ನಿಲ್ಲಿಸಿ ಅವಾಚ್ಯ ಶಬ್ದಗಳಿಂದ ನಿಂದಿಸಲಾಗಿದೆ. ಅಲ್ಲದೆ ಹುಡುಗಿಯರ ಮೇಲೆ ಚಪ್ಪಲಿ ಎಸೆದು ಕೋಚಿಂಗ್ ಸೆಂಟರ್ ಮಾಲೀಕ ಅಸಭ್ಯವಾಗಿ ವರ್ತಿಸಿದ್ದಾನೆ. ಘಟನೆಗೆ ನಿಖರವಾದ ಕಾರಣ ತಿಳಿದುಬಂದಿಲ್ಲ.ಪ್ರಕರಣವನ್ನು ಸ್ಥಳೀಯ ಪೊಲೀಸರು ಗಂಭೀರವಾಗಿ ಪರಿಗಣಿಸಿದ್ದಾರೆ. ಕೇಸ್ ದಾಖಲಿಸಿ ಹೆಚ್ಚಿನ ತನಿಖೆ ಕೈಗೊಂಡಿದ್ದಾರೆ.