ನಟ ಸುದೀಪ್ ಅವರ ತಾಯಿ ಸರೋಜಾ ನಿಧನರಾಗಿದ್ದು, ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದರು. ಶನಿವಾರ ಸಂಜೆಯೇ ಸುದೀಪ್ ತಾಯಿ ಅವರ ಆರೋಗ್ಯದಲ್ಲಿ ಏರುಪೇರು ಉಂಟಾಗಿದೆ ಎಂದು ತಿಳಿದು ಬಂದಿತ್ತು. ಇಂದು ಚಿಕಿತ್ಸೆ ಫಲಕಾರಿಯಾಗದೇ ಸುದೀಪ್ ಅವರ ತಾಯಿ ಕೊನೆಯುಸಿರೆಳೆದಿದ್ದಾರೆ.

ಜೆಪಿ ನಗರದ ನಿವಾಸದಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಕಲ್ಪಿಸಲಾಗಿದ್ದು, ಮಧ್ಯಾಹ್ನ 12 ಗಂಟೆಯ ನಂತರ ಅಂತಿಮ ವಿಧಿವಿಧಾನಗಳು ನಡೆಯಲಿವೆ ಎಂದು ತಿಳಿದು ಬಂದಿದೆ. ಸುದೀಪ್ ಅವರ ತಾಯಿ ಸರೋಜಾ ನಿಧನದ ಸುದ್ದಿ ತಿಳಿಯುತ್ತಿದ್ದಂತೆ ಚಿತ್ರರಂಗದ ಗಣ್ಯರು, ಅಭಿಮಾನಿಗಳು ಸೇರಿದಂತೆ ಜೆಪಿ ನಗರದ ನಿವಾಸದತ್ತ ಆಗಮಿಸುತ್ತಿದ್ದಾರೆ.

Leave a Reply

Your email address will not be published. Required fields are marked *

Join WhatsApp Group
error: Content is protected !!