ಪುತ್ತೂರು; ವಿಧಾನಪರಿಷತ್ ಚುನಾವಣಾ ಹಿನ್ನೆಲೆಯಲ್ಲಿ ಕಿಲ್ಲೆ ಮೈದಾನದಲ್ಲಿ ನಡೆಯುತ್ತಿದ್ದ ಸೋಮವಾಋದ ಸಂತೆಯನ್ನು ಅಧಿಕಾರಿಗಳು ರದ್ದು ಮಾಡಿದ್ದು , ಅಧಿಕಾರಿಗಳ ಜೊತೆ ಮಾತುಕತೆ ನಡೆಸಿದ ಶಾಶಕರು ಕಿಲ್ಲೆ ಮೈದಾನದಲ್ಲೇ ಸಂತೆ ನಡೆಸಲು ಅವಕಾಶ ನೀಡುವಂತೆ ಸೂಚನೆಯನ್ನು ನೀಡಿದ್ದು, ಶಾಸಕ ಅಶೋಕ್ ರೈ ಅವರ ಸೂಚನೆಯಂತೆ ಕಿಲ್ಲೆ ಮೈದಾನದಲ್ಲೇ ಸಂತೆ ನಡೆಯಲಿದೆ.

ಪುತ್ತೂರು ನಗರಸಭಾ ವ್ಯಾಪ್ತಿಯ ಮತಗಟ್ಟೆಯಿಂದ ೨೦೦ ಮೀಟರ್ ದೂರದಲ್ಲಿ ಕಿಲ್ಲೆ ಮೈದಾನ ಇರುವ ಕಾರಣ ನೀತಿ ಸ|ಂಹಿತೆಯ ನೆಪದಲ್ಲಿ ವಾರದ ಸಂತೆಯನ್ನು ಅಧಿಕಾರಿಗಳು ರದ್ದು ಮಾಡಿದ್ದರು. ಈ ಬಗ್ಗೆ ಸಂತೆ ವ್ಯಾಪಾರಿಗಳು ಶಾಸಕರ ಗಮನಕ್ಕೆ ತಂದಿದ್ದರು. ತಕ್ಷಣ ಸ್ಪಂದಿಸಿದ ಶಾಸಕರು ಅಧಿಕಾರಿಗಳ ಜೊತೆ ಈ ವಿಚಾರದಲ್ಲಿ ಮಾತುಕತೆ ನಡೆಸಿ ವಾರದ ಸಂತೆ ಕಿಲ್ಲೆ ಮೈದಾನದಲ್ಲೇ ನಡೆಯುತ್ತದೆ ಅದಕ್ಕೆ ಯಾವುದೇ ಅಡಚಣೆಯಾಗಬಾರದು, ಕಿಲ್ಲೆ ಮೈದಾನದಲ್ಲೇ ಸಂತೆ ನಡೆಸಲು ಅವಕಾಶ ನೀಡಬೇಕು ಎಂದು ಸೂಚನೆಂಯನ್ನು ನೀಡಿದ್ದಾರೆ. ಶಾಸಕರ ಆದೇಶದಂತೆ ನಾಳೆ ಎಂದಿನಂತೆ ಕಿಲ್ಲೆ ಮೈದಾನದಲ್ಲೇ ಸಂತೆ ವ್ಯಾಪಾರ ನಡೆಯಲಿದೆ.

Leave a Reply

Your email address will not be published. Required fields are marked *

Join WhatsApp Group
error: Content is protected !!