ಹಾವೇರಿ: ಶಿಗ್ಗಾಂವಿ ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಪಕ್ಷದಲ್ಲಿ ಮುಖಂಡರ ನಡುವೆ ತಿಕ್ಕಾಟ ಶುರುವಾಗಿದ್ದು, ಸಚಿವ ಝಮೀರ್ ಅಹ್ಮದ್ ಖಾನ್ ಅವರ ಕಾರಿನ ಮೇಲೆ ಕೆಲ ಕಾರ್ಯಕರ್ತರು ಹುಲಗೂರಿನಲ್ಲಿ ಕಲ್ಲು ತೂರಾಟ ನಡೆಸಿದ್ದಾರೆ.

ಪಕ್ಷೇತರಾಗಿ ನಾಮಪತ್ರ ಸಲ್ಲಿಸಿರುವ ಸೈಯದ್ ಅಜ್ಜಂಪೀರ್ ಖಾದ್ರಿ ಅವರ ಮನವೋಲಿಸಲು ಝಮೀರ್ ಅಹ್ಮದ್ ಅವರು ಮನೆಗೆ ಹೋಗಿದ್ದರು. ಇದೇ ಸಂದರ್ಭದಲ್ಲಿ ಅವರು ಅಭ್ಯರ್ಥಿ ಯಾಸೀರ್ ಅಹ್ಮದ್ ಖಾನ್ ಅವರ ಕಾರಿನಲ್ಲಿ ಹೋಗಿದ್ದರು.

ಟಿಕೆಟ್ ಕೈ ತಪ್ಪಿದ್ದರಿಂದ ಆಕ್ರೋಶಗೊಂಡಿರುವ ಸೈಯದ್ ಖಾದ್ರಿ ಪರ ಬೆಂಬಲಿಗರು, ಕಾರಿನ ಮೇಲೆ ಏಕಾಏಕಿ ಕಲ್ಲು ತೂರಾಟ ನಡೆಸಿದ್ದಾರೆ. ಸ್ಥಳೀಯ ಮುಖಂಡರು ಜಮೀರ್ ಅವರನ್ನು ಪಾರು ಮಾಡಿ ವಾಪಸು ಕಳುಹಿಸಿದ್ದಾರೆ.

Leave a Reply

Your email address will not be published. Required fields are marked *

Join WhatsApp Group
error: Content is protected !!