ಬೆಂಗಳೂರು  : ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಅವರ ಪತ್ನಿ ಸಾವಿನಲ್ಲಿ ಶೋಭಾ ಕರಂದ್ಲಾಜೆ ಅವರ ಪಾತ್ರವಿದೆ ಎಂದು ಸಚಿವ ಬೈರತಿ ಸುರೇಶ್ ಕೆಲವು ದಿನಗಳ ಹಿಂದೆ ಸ್ಪೋಟ ಆರೋಪ ಮಾಡಿದ್ದರು. ಇದೀಗ ಶೋಭಾ ಕರಂದ್ಲಾಜೆ ವಿರುದ್ಧ ಮತ್ತೊಂದು ಆರೋಪ ಮಾಡಿರುವ ಅವರು, ಬಿಜೆಪಿ ಅಧಿಕಾರ ಅವಧಿಯಲ್ಲಿ ಇಂಧನ ಸಚಿವರಾಗಿದ್ದ ಶೋಭಾ ಕರಂದ್ಲಾಜೆ ವಿರುದ್ಧ ಭ್ರಷ್ಟಾಚಾರ ಆರೋಪ ಮಾಡಿದ್ದಾರೆ.

ಬೆಂಗಳೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಸಚಿವೆ ಶೋಭಾ ಕರಂದ್ಲಾಜೆ ವಿರುದ್ಧ ಪ್ರಕರಣದ ದಾಖಲೆಯನ್ನು ಹೊರಹಾಕುತ್ತೇವೆ.ದಾಖಲೆ ಸಂಗ್ರಹಿಸಲು ಪೊನ್ನಣ್ಣ ಅವರಿಗೆ ಸೂಚಿಸಲಾಗಿದೆ. ಈ ಹಿಂದೆ ಇಂಧನ ಸಚಿವರಾಗಿದ್ದಾಗ ಭ್ರಷ್ಟಾಚಾರ ಮಾಡಿದ್ದಾರೆ. 15 ದಿನಗಳಲ್ಲಿ ಭ್ರಷ್ಟಾಚಾರದ ದಾಖಲೆ ಬಿಡುಗಡೆ ಮಾಡುತ್ತೇವೆ ಎಂದು ಬೆಂಗಳೂರಿನಲ್ಲಿ ನಗರಾಭಿವೃದ್ಧಿ ಸಚಿವ ಭೈರತಿ ಸುರೇಶ್ ಹೇಳಿಕೆ ನೀಡಿದರು.

ಇನ್ನು ಪರಿಷತ್ ಸದಸ್ಯ ಎಚ್ ವಿಶ್ವನಾಥ್ ವಿರುದ್ಧ ವಾಗ್ದಾಳಿ ನಡೆಸಿರುವ ಸಚಿವ ಭೈರತಿ ಸುರೇಶ್ ಅವರು, ಎಚ್. ವಿಶ್ವನಾಥ್ ಒಬ್ಬ ರೋಲ್ ಕಾಲ್ ಬ್ಲಾಕ್ ಮೇಲರ್ ಕಾಂಗ್ರೆಸ್ ಪಕ್ಷ  ಎಚ್. ವಿಶ್ವನಾಥ್ ಅಪ್ಪನ ಮನೆ ಆಸ್ತಿಯಲ್ಲ ಎಂದು ಎಚ್ ವಿಶ್ವನಾಥ್ ವಿರುದ್ಧ ಸಚಿವ ಭೈರತಿ ಸುರೇಶ್ ವಾಗ್ದಾಳಿ ನಡೆಸಿದರು.

Leave a Reply

Your email address will not be published. Required fields are marked *

Join WhatsApp Group
error: Content is protected !!