ಬೆಂಗಳೂರು : ಶಿಗ್ಗಾಂವ್ ಕ್ಷೇತ್ರದಿಂದ ಕಾಂಗ್ರೆಸ್ ಬಂಡಾಯ ಅಭ್ಯರ್ಥಿಯಾಗಿ ಸಲ್ಲಿಸಿರುವ ನಾಮಪತ್ರ ವಾಪಸ್ ಪಡೆಯುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಜ್ಜಂಪೀರ್ ಖಾದ್ರಿ ಅವರ ಮನವೊಲಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಅಜ್ಜಂಪೀರ್ ಖಾದ್ರಿ ಅವರನ್ನು ಸಚಿವ ಜಮೀರ್ ಅಹಮದ್ ಖಾನ್ ಅವರು ಮುಖ್ಯಂತ್ರಿ ಸಿದ್ದರಾಮಯ್ಯ ಅವರ ಬಳಿ ಕರೆದೊಯ್ದು ಸಮಾಲೋಚನೆ ನಡೆಸಿದರು.

ಸುಮಾರು ಅರ್ಧ ಗಂಟೆ ಅಜ್ಜಂಪೀರ್ ಖಾದ್ರಿ ಅವರೊಂದಿಗೆ ಸಿದ್ದರಾಮಯ್ಯ ಮಾತುಕತೆ ನಡೆಸಿದ್ದು, ಈ ವೇಳೆ ನಾಮಪತ್ರ ವಾಪಸ್ ಪಡೆಯುವಂತೆ ಸಿಎಂ ಸೂಚಿಸಿದ್ದಾರೆ ಎನ್ನಲಾಗಿದೆ.

ಶಿಗ್ಗಾಂವ್ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಗೆಲ್ಲಬೇಕು, ಬಿಜೆಪಿ ಅಭ್ಯರ್ಥಿಯನ್ನು ಸೋಲಿಸಬೇಕು, ನೀವು ಪಕ್ಷದ ಪರ ಕೆಲಸ ಮಾಡಬೇಕು ಎಂದು ಅಜ್ಜಂಪೀರ್ ಅವರನ್ನು ಸಿದ್ದರಾಮಯ್ಯ ಮನವೊಲಿಸಿದ್ದಾರೆ ಎಂದು ತಿಳಿದುಬಂದಿದೆ.

ರಾಜ್ಯದಲ್ಲಿ ಶಿಗ್ಗಾಂವ್, ಸಂಡೂರು ಮತ್ತು ಚನ್ನಪಟ್ಟಣ ವಿಧಾನಸಭಾ ಕ್ಷೇತ್ರಗಳಿಗೆ ಉಪಚುನಾವಣೆ ನಡೆಯುತ್ತಿದ್ದು, ಈಗಾಗಲೇ ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿಯಾಗಿದ್ದ ಸಯ್ಯದ್ ಅಜ್ಜಂಪೀರ್ ಖಾದ್ರಿ� ಅವರು‌ ಕೊನೆ ಗಳಿಗೆಯಲ್ಲಿ ನಿನ್ನೆ ನಾಮಪತ್ರ ಸಲ್ಲಿಸಿದ್ದರು.� ಶಿಗ್ಗಾಂವ್ ನಲ್ಲಿ ಮುಸ್ಲಿಂ ಮತದಾರರ ಸಂಖ್ಯೆ ನಿರ್ಣಾಯಕ ಪಾತ್ರವಹಿಸುವುದರಿಂದ ಕಾಂಗ್ರೆಸ್‌ನ ಸಾಂಪ್ರದಾಯಿಕ ಮತಗಳು ಬಂಡಾಯ ಅಭ್ಯರ್ಥಿಯಿಂದ ಹಂಚಿಹೋದರೆ ಕಾಂಗ್ರೆಸ್ ಸೋಲು ಖಚಿತ ಎಂಬುವುದು ಖಾತ್ರಿಯಾಗಿತ್ತು.� ಇದು ಕಾಂಗ್ರೆಸ್ ನಾಯಕರಿಗೆ ದೊಡ್ಡ ತಲೆನೋವಾಗಿತ್ತು. ಇದೀಗ ಖಾದ್ರಿ ಅವರ ಮನವೊಲಿಸುವಲ್ಲಿ ಸಿಎಂ ಸಿದ್ದರಾಮಯ್ಯ ಯಶಸ್ವಿಯಾಗಿದ್ದಾರೆ.

Leave a Reply

Your email address will not be published. Required fields are marked *

Join WhatsApp Group
error: Content is protected !!