
ಉಪ್ಪಿನಂಗಡಿ: ಇಲ್ಲಿನ ಬಜತ್ತೂರು ಗ್ರಾಮದ ಮಣಿಕ್ಕಳ ಪಾಲೆತ್ತಡಿ ನಿವಾಸಿ ರಾಮಣ್ಣ ಗೌಡ (69 ವ.) ಅ. 26ರಂದು ಹೃದಯಾಘಾತದಿಂದ ನಿಧನ ಹೊಂದಿದರು.
ಪ್ರಗತಿಪರ ಕೃಷಿಕರಾಗಿರುವ ರಾಮಣ್ಣ ಗೌಡರು ಮಧ್ಯಾಹ್ನದವರೆಗೂ ತೋಟದಲ್ಲಿ ಕೆಲಸ ಮಾಡಿಕೊಂಡಿದ್ದವರು ಈ ಹಠಾತ್ತನೆ ಎದೆನೋವು ಕಾಣಿಸಿಕೊಂಡಿದ್ದು, ಉಪ್ಪಿನಂಗಡಿ ಆಸ್ಪತ್ರೆಗೆ ಕರೆತರುವಷ್ಟರಲ್ಲಿ ಮೃತಪಟ್ಟಿದ್ದರು. ಮೃತ ರಾಮಣ್ಣಗೌಡರವರು ಪತ್ನಿ ಚಂದ್ರಾವತಿ, ಪುತ್ರಿಯರಾದ ಶಶಿಕಲಾ, ಚೈತ್ರ, ಪುತ್ರರಾದ ಧನಂಜಯ, ಲೋಕೇಶ್ ಹಾಗೂ ಸಹೋದರಾರದ ಮುಂಬೈ ಕರ್ನಾಟಕ ಮಲ್ಲ ಪತ್ರಿಕೆಯ ಸಂಪಾದಕ ಚಂದ್ರಶೇಖರ ಪಾಲೆತ್ತಡಿ, ಸಂಯುಕ್ತ ಕರ್ನಾಟಕ ಪುತ್ತೂರು ತಾಲೂಕು ವರದಿಗಾರ ಮೇಘ ಪಾಲೆತ್ತಡಿ ಮತ್ತು ಇಬ್ಬರು ಸಹೋದರಿಯರನ್ನು ಅಗಲಿದ್ದಾರೆ.






