ಅಲ್ಪಕಾಲದ ಅಸೌಖ್ಯದಿಂದಾಗಿ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಮಂಜೇಶ್ವರ ಗೋವಿಂದ ಪೈ ಸರಕಾರಿ ಕಾಲೇಜಿನ ಪ್ರಥಮ ಪದವಿ ತರಗತಿ ವಿದ್ಯಾರ್ಥಿನಿ ಮುಗು ರೋಡಿನ ಮುಹಮ್ಮದ್ – ಪೌಸಿಯ ದಂಪತಿಗಳ ಪ್ರತ್ರಿ ತ್ವಯಿಬಾ (18) ಚಿಕಿತ್ಸೆ ಫಲಕಾರಿಯಾಗದೇ ಸಾವನಪ್ಪಿದ್ದಾರೆ.

ತ್ವಯಿಬಾ ಗೋವಿಂದ ಪೈ ಸರಕಾರಿ ಕಾಲೇಜಿನ ಪ್ರಥಮ ವರ್ಷ ಬಿಟಿಟಿಎಂ ವಿದ್ಯಾರ್ಥಿನಿಯಾಗಿದ್ದಳು. ಕಳೆದ ಹಲವು ದಿನಗಳಿಂದ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ವಿದ್ಯಾರ್ಥಿನಿ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ, ವಿದ್ಯಾರ್ಥಿನಿಯ ಆಕಾಲಿಕ ಮರಣಕ್ಕೆ ಮಂಜೇಶ್ವರ ಗೋವಿಂದ ಪೈ ಸರಕಾರಿ ಕಾಲೇಜಿನ ಪ್ರಾಚಾರ್ಯರಾದ ಮುಹಮ್ಮದ್ ಅಲಿ ಪೆರ್ಲ, ಸಿನಿಯರ್ ಸುಪ್ರಡೆಂಟ್ ದಿನೇಶ್ ಕಾಲೇಜಿನ HOD, ಉಪನ್ಯಾಸಕರು ಅಧ್ಯಾಪಕರು ಹಾಗೂ ವಿದ್ಯಾರ್ಥಿಗಳು ಸಂತಾಪವನ್ನು ಸೂಚಿಸಿದ್ದಾರೆ. ಅಕಾಲಿಕ ಮರಣ ಕಾಲೇಜು ನೌಕರರು ಹಾಗೂ ವಿದ್ಯಾರ್ಥಿಗಳನ್ನು ಹಾಗೂ ಮುಗು ಪ್ರದೇಶವಾಸಿಗಳನ್ನು ಶೋಕ ಸಾಗರದಲ್ಲಿ ಮುಳುಗಿಸಿದೆ.

Leave a Reply

Your email address will not be published. Required fields are marked *

Join WhatsApp Group
error: Content is protected !!