ಅನಾಥನನ್ನು ಮದುವೆಯಾಗಿದ್ದ ಮಹಿಳೆಯೊಬ್ಬಳು ಅನುಮಾನಾಸ್ಪದವಾಗಿ ಮೃತಪಟ್ಟಿರುವ ಘಟನೆ ಕೋಲಾರದಲ್ಲಿ ನಡೆದಿದೆ.

ನಂದಿನಿ (24) ಮೃತ ಮಹಿಳೆ. ಕೋಲಾರ ತಾಲೂಕಿನ ತೊಟ್ಲಿ ಗ್ರಾಮದಲ್ಲಿ ನಂದಿನಿ ಅನುಮಾನಾಸ್ಪದ ರೀತಿಯಲ್ಲಿ ಮೃತಪಟ್ಟಿದ್ದು, ತೊಟ್ಲಿ ಮೂಲದ ಪತಿ ನಾಗೇಶ್ ಕಿರುಕುಳದಿಂದ ಸಾವನ್ನಪ್ಪಿರುವ ಶಂಕೆ ವ್ಯಕ್ತವಾಗಿದೆ.

ಕಳೆದ ರಾತ್ರಿ ಕುಡಿದು ಬಂದು ಪತಿ ನಾಗೇಶ್‌ ಹಾಗೂ ನಂದಿನಿ ಇಬ್ಬರು ಗಲಾಟೆ ಮಾಡಿಕೊಂಡಿದ್ದು, ಈ ವೇಳೆ ನಾಗೇಶ್ ತನ್ನ ಪತ್ನಿ ನಂದಿನಿ ಕುತ್ತಿಗೆ ಹಿಸುಕಿ ಕೊಲೆ ಮಾಡಿರುವ ಅನುಮಾನವನ್ನು ಗ್ರಾಮಸ್ಥರು ವ್ಯಕ್ತಪಡಿಸಿದ್ದಾರೆ.

ಘಟನೆ ಹಿನ್ನೆಲೆಯಲ್ಲಿ ಕೋಲಾರ ಗ್ರಾಮಾಂತರ ಪೊಲೀಸರು ಪತಿ ನಾಗೇಶ್‌ನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. ನಂದಿನಿ ಮರಣೋತ್ತರ ಪರೀಕ್ಷೆ ಮಾಡಿಸಲಾಗಿದ್ದು, ಪ್ರಕರಣ ದಾಖಲು ಮಾಡಿಕೊಂಡು ತನಿಖೆ ಕೈಗೊಳ್ಳಲಾಗಿದೆ.

Leave a Reply

Your email address will not be published. Required fields are marked *

Join WhatsApp Group
error: Content is protected !!