ಹೈದರಾಬಾದ್ : ಪಟಾಕಿ ತುಂಬಿದ ಗೋಡೌನ್ ಗೆ ಆಕಸ್ಮಿಕ ಬೆಂಕಿ ಬಿದ್ದ ಪರಿಣಾಮ ಅಪಾರ ಪ್ರಮಾಣದ ಸಾಮಗ್ರಿಗಳು ಸುಟ್ಟು ಭಸ್ಮವಾಗಿರುವ ಘಟನೆ ಹೈದರಾಬಾದಿನ ಹನುಮಾನ್ ತೆಕಡಿಯ ಪ್ರಗತಿ ಮಹಾ ವಿದ್ಯಾಲಯದ ಬಳಿಯ ಭಾನುವಾರ ತಡರಾತ್ರಿ ನಡೆದಿದೆ.
ದೀಪಾವಳಿಯ ಹಿನ್ನಲೆ ಕೆಲಸ ಹೆಚ್ಚಿದ್ದ ಕಾರಣ ತಡರಾತ್ರಿಯವರೆಗೆ ಕಾರ್ಮಿಕರು ಕೆಲಸ ಮಾಡುತ್ತಿದ್ದರು ಈ ವೇಳೆ ಗೋಡೌನ್ ಗೆ ದಿಢೀರ್ ಬೆಂಕಿ ಹೊತ್ತಿಕೊಂಡಿದ್ದು, ಕೂಡಲೇ ಅಗ್ನಿಶಾಮಕ ದಳ ಸಿಬ್ಬಂದಿ ಹಾಗೂ ಸುಲ್ತಾನ್ ಬಜಾರ್ ಪೊಲೀಸರು ಸ್ಥಳಕ್ಕೆ ಆಗಮಿಸಿ ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಇನ್ನು ಈ ಬಗ್ಗೆ ಹೆಚ್ಚುವರಿ ಪೊಲೀಸ್ ಕಮಿಷನರ್ ಪ್ರತಿಕ್ರಿಯಿಸಿದ್ದು, ಭಾನುವಾರ ರಾತ್ರಿ ಅಗ್ನಿ ದುರಂತ ಸಂಭವಿಸಿದ್ದು, ಬೆಂಕಿ ಹೊತ್ತಿಕೊಂಡಾಗ ಕಾಲ್ತುಳಿತದಂತಹ ಪರಿಸ್ಥಿತಿ ಉಂಟಾಗಿದೆ. ಈ ವೇಳೆ ಇಬ್ಬರಿಗೆ ಗಾಯಗಳಾಗಿದ್ದು ಅವರನ್ನು ಆಸ್ಪತ್ರೆಗೆ ರವಾನಿಸಲಾಗಿದೆ.
ಇನ್ನು ಅಗ್ನಿ ದುರಂತದಲ್ಲಿ ಹಲವಾರು ಜನರಿಗೆ ಸಣ್ಣ ಪುಟ್ಟ ಸುಟ್ಟ ಗಾಯಗಳಾಗಿದ್ದು, ಬೆಂಕಿ ಹೊತ್ತಿಕೊಂಡ ಕೆಲವೇ ಕೆಲವು ನಿಮಿಷಗಳಲ್ಲಿ ಅಂಗಡಿ ಸಂಪೂರ್ಣ ಸುಟ್ಟು ಭಸ್ಮವಾಗಿದೆ. ಈ ಘಟನೆಯಲ್ಲಿ 7 ಕ್ಕೂ ಹೆಚ್ಚು ಕಾರು ಸುಟ್ಟು ಹೋಗಿದೆಸದ್ಯ ಬೆಂಕಿಗೆ ಕಾರಣ ಇನ್ನೂ ತಿಳಿದುಬಂದಿಲ್ಲ, ಆದರೆ ಸರಿಯಾದ ಅನುಮತಿಯನ್ನು ಪಡೆಯದೆ ಅಂಗಡಿಯನ್ನು ಸ್ಥಾಪಿಸಿದ್ದಕ್ಕಾಗಿ ಅಂಗಡಿ ಮಾಲೀಕರ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.