ಬೆಂಗಳೂರು : ಇತ್ತೀಚಿನ ವರ್ಷಗಳಲ್ಲಿ ಹೃದಯ ಸಂಬಂಧಿ ಖಾಯಿಲಗೆಳು (Heart Related Issues) ಜನರನ್ನು ಹೆಚ್ಚು ಬಾಧಿಸುತ್ತಿದ್ದು, ಯುವಕರ ನ್ನು ಈ ರೋಗಕ್ಕೆ ಬಲಿಯಾಗುತ್ತಿದ್ದಾರೆ. ಆಘಾತಕಾರಿ ಘಟನೆಯೊಂದರಲ್ಲಿ ನವವಿವಾಹಿತನೋರ್ವ ಹೃದಯಾಘಾತವಾಗಿ (Heart Attack) ಮೃತಪಟ್ಟಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ.

ಮೃತರನ್ನು ಪ್ರಜ್ವಲ್ (24) ಎಂದು ಗುರುತಿಸಲಾಗಿದ್ದು, ಐದು ದಿನದ ಹಿಂದಷ್ಟೇ ಇವರ ವಿವಾಹವಾಗಿತ್ತಂತೆ. ಇವರು ರಾಜಾಜಿನಗರದ ನಿವಾಸಿ ಎಂದು ವರದಿಯಾಗಿದೆ. ಅಕ್ಟೋಬರ್ 28ರಂದು ಈ ಘಟನೆ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ.

ಸುದ್ದಿ ಮೂಲಗಳಿಂದ ತಿಳಿದು ಬಂದಿರುವ ಮಾಹಿತಿ ಪ್ರಕಾರ, ಅಕ್ಟೋಬರ್ 28ರಂದು ಮನೆಯಲ್ಲಿರುವಾಗ ಪ್ರಜ್ವಲ್ಗೆ ಹೃದಯಾಘಾತವಾಗಿದ್ದು (Heart Attack), ಕೂಡಲೇ ಅವರನ್ನು ತಕ್ಷಣವೇ ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ಆಸ್ಪತ್ರೆ ಮುಟ್ಟುವ ಮುನ್ನವೇ ಪ್ರಜ್ವಲ್ ಮೃತಪಟ್ಟಿರುವುದಾಗಿ ರವೈದ್ಯರು ಘೋಷಿಸಿದ್ದಾರೆ.

Leave a Reply

Your email address will not be published. Required fields are marked *

Join WhatsApp Group
error: Content is protected !!