



ಪುತ್ತೂರು : ಪುತ್ತೂರಿನಲ್ಲಿ ರೈ ಎಸ್ಟೇಟ್ & ಚಾರಿಟೇಬಲ್ ಟ್ರಸ್ಟ್ ನ ಮುಖ್ಯಸ್ಥರಾದ ಶಾಸಕ ಅಶೋಕ್ ಕುಮಾರ್ ರೈ ಯವರ ನೇತೃತ್ವದ ‘ಅಶೋಕ ಜನಮನ’ ಕಾರ್ಯಕ್ರಮ ನ.2ರಂದು ಕೊಂಬೆಟ್ಟು ತಾಲೂಕು ಕ್ರೀಡಾಂಗಣದಲ್ಲಿ ನಡೆಯಲಿದೆ.
ಈ ಕಾರ್ಯಕ್ರಮಕ್ಕೆ ಸಿಎಂ, ಡಿಸಿಎಂ ಭಾಗವಹಿಸುತ್ತಾರೆ ಎನ್ನಲಾಗುತ್ತಿದ್ದು. ಡಿಸಿಎಂ ಡಿ.ಕೆ ಶಿವಕುಮಾರ್ ಆಗಮಿಸುವುದು ದೃಡಪಟ್ಟಿದೆ.
ಡಿಕೆಶಿ ಬೆಂಗಳೂರಿನಿಂದ ಹೊರಟು ಮಂಗಳೂರು ವಿಮಾನ ನಿಲ್ದಾಣ ನಂತರ ರಸ್ತೆ ಮೂಲಕ ಪುತ್ತೂರು ಅಶೋಕ್ ರೈಯವರ ಕಾರ್ಯಕ್ರಮ ನಂತರ ಕೊಲ್ಲೂರು ದೇವಸ್ಥಾನದಲ್ಲಿ ವಿಶೇಷ ಪೂಜೆಗೆ ತೆರಳಲಿರುವರು ಎನ್ನುವ ಪ್ರವಾಸ ವೇಳಾಪಟ್ಟಿ ಬಿಡುಗಡೆಯಾಗಿದೆ.
ಈ ಹಿನ್ನೆಲೆಯಲ್ಲಿ ಭದ್ರತೆ ಹಾಗೂ ಕೈಗೊಂಡ ವ್ಯವಸ್ಥೆಗಳ ಬಗ್ಗೆ ಜಿಲ್ಲಾ ಎಸ್ ಪಿ ಯವರಿಂದ ಕೊಂಬೆಟ್ಟು ಕ್ರೀಡಾಂಗಣದಲ್ಲಿ ಪರಿಶೀಲನೆ ನಡೆಸಿ ಶಾಸಕ ಅಶೋಕ್ ರೈ ಜೊತೆ ಚರ್ಚೆ ನಡೆಸಿದರು
