
ವಿಟ್ಲ : ಕಳವು ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರನ್ನು ವಿಟ್ಲ ಪೊಲೀಸರು ಬಂಧಿಸಿದ್ದಾರೆ.
ವಿಟ್ಲ ಪೊಲೀಸ್ ಠಾಣಾ ಸರಹದ್ದಿನ ಕಳವು ಪ್ರಕರಣಗಳ ಪತ್ತೆಯಲ್ಲಿ ತೊಡಗಿದ್ದ ವಿಟ್ಲ ಠಾಣಾ ಅಪರಾದ ತಂಡದ ಸಿಬ್ಬಂದಿಗಳು ಅ.29 ರಂದು ಬಂಟ್ವಾಳ ತಾಲೂಕು ಮಾಣಿ ಜಂಕ್ಷನ್ ನಲ್ಲಿ ಇಬ್ಬರು ಕಳ್ಳರನ್ನು ಬಂಧಿಸಿದ್ದು, ವಿಚಾರಿಸಿದಾಗ ವಿಟ್ಲ ಠಾಣೆಯ ಮಿತ್ತೂರು, ಕೊಡಾಜೆ ಮನೆ ಕಳವು ಎರಡು ಪ್ರಕರಣಗಳಲ್ಲಿ ಹಾಗೂ ಪುತ್ತೂರು ನಗರ ಠಾಣಾ ವ್ಯಾಪ್ತಿಯ ಶಾಲೆ ಹಾಗೂ ಅಂಗನವಾಡಿ ಕಳವು ಎರಡು ಪ್ರಕರಣಗಳಲ್ಲಿ ಭಾಗಿಯಾಗಿರುವುದು ತಿಳಿದು ಬಂದಿದೆ.
ಉಳ್ಳಾಲ ತಾಲೂಕು ಬೋಳಿಯಾರು ಧರ್ಮನಗರದ ಮಹಮ್ಮದ್ ರಿಯಾಜ್ ಹಸನಬ್ಬ, ಉಳ್ಳಾಲ ಹಳೆ ಕೋಟೆಯ ಮೊಹಮ್ಮದ್ ಇಂತಿಯಾಜ್ ಬಂಧಿತರು.
ಮಹಮ್ಮದ್ ರಿಯಾಜ್ ಹಸನಬ್ಬ ವಿರುದ್ಧ ಕೇರಳ ರಾಜ್ಯದ ಕುಂಬಳೆ ಹಾಗೂ ಮಂಗಳೂರು ನಗರ ಕೊಣಾಜೆ ಪೊಲೀಸ್ ಠಾಣೆಯಲ್ಲಿ ಕಳ್ಳತನ ಪ್ರಕರಣ ದಾಖಲಾಗಿರುತ್ತವೆ.
ವಿಟ್ಲ ಪೊಲೀಸರು ಬೇಧಿಸಿದ 04 ಪ್ರಕರಣಗಳ ವಿವರ
1] ವಿಟ್ಲ ಪೊಲೀಸು ಠಾಣಾ ಅ.ಕ್ರ:163/2024 ಕಲಂ:331(3),331(4),305 BNS-2023,
2] ವಿಟ್ಲ ಪೊಲೀಸು ಠಾಣಾ ಅ.ಕ್ರ:166/2024 ಕಲಂ:331(3),331(4),305 BNS-2023
3] ಪುತ್ತೂರು ನಗರ ಪೊಲೀಸು ಠಾಣಾ ಅ.ಕ್ರ:95/2024 ಕಲಂ:331(3),331(4),305 BNS-2023
4] ಪುತ್ತೂರು ನಗರ ಪೊಲೀಸು ಠಾಣಾ ಅ.ಕ್ರ:96/2024 ಕಲಂ:331(3),331(4),305 BNS-2023
ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ನಡೆಸಿ ರೂ 1,35,000/–ರೂ ಮೌಲ್ಯದ ಗ್ಯಾಸ್ ಸಿಲಿಂಡರ್ ಹಾಗೂ ಮನೆ ಸಾಮಗ್ರಿಗಳು , ಹಾಗೂ ಕಳ್ಳತನಕ್ಕೆ ಉಪಯೋಗಿಸಿದ ಆಟೋ ರಿಕ್ಷಾ-1 ಅಂದಾಜು ಮೌಲ್ಯ 1,50,000/- ರೂ ಆಗಿದ್ದು ಇವುಗಳನ್ನು ವಶಪಡಿಸಿಕೊಳ್ಳಲಾಗಿದೆ.
ಸ್ವಾದೀನಪಡಿಸಿಕೊಂಡ ಸೊತ್ತುಗಳ ಒಟ್ಟು ಮೌಲ್ಯ- 2,85,000/- ರೂ ಆಗಬಹುದು.
ಕಾರ್ಯಾಚರಣೆಯನ್ನು ದ.ಕ ಜಿಲ್ಲಾ ಪೊಲೀಸ್ ಅಧೀಕ್ಷಕರಾದ ಯತೀಶ್ ಎನ್ ಐ.ಪಿ.ಎಸ್ ಮತ್ತು ಹೆಚ್ಚುವರಿ ಪೊಲೀಸ್ ಅಧೀಕ್ಷಕರಾದ ರಾಜೇಂದ್ರ ಡಿ ಎಸ್ ರವರ ಮಾರ್ಗದರ್ಶನದಂತೆ ಬಂಟ್ವಾಳ ಉಪವಿಭಾಗದ ಪೊಲೀಸ್ ಉಪಾಧೀಕ್ಷಕರಾದ ಎಸ್. ವಿಜಯ ಪ್ರಸಾದ್ ರವರ ನಿರ್ದೇಶನದಂತೆ, ವಿಟ್ಲ ಪೊಲೀಸ್ ಠಾಣಾ ಪೊಲೀಸ್ ನಿರೀಕ್ಷಕರಾದ ನಾಗರಾಜ್ ಹೆಚ್ ಈ ರವರ ನೇತೃತ್ವದಲ್ಲಿ ಪೊಲೀಸ್ ಉಪ ನಿರೀಕ್ಷಕರಾದ ವಿದ್ಯಾ ಕೆ.ಜೆ. ರತ್ನಕುಮಾರ್, ಕೌಶಿಕ್ ಸಿಬ್ಬಂಧಿಗಳಾದ ಉದಯ ರೈ, ರಾಧಾಕೃಷ್ಣ ,ರಕ್ಷೀತ್ ರೈ,ಶ್ರೀಧರ ಸಿ ಎಸ್, ಕೃಷ್ಣ ನಾಯ್ಕ್, ಗದಿಗೆಪ್ಪ ಕಲ್ಲೂರ, ಶಂಕರ ಶಂಶಿ, ಮನೋಜ್, ಸತೀಶ್ , ಗಣಕಯಂತ್ರ ವಿಭಾಗದ ಸಂಪತ್, ದಿವಾಕರ್, ಭಾಗವಹಿಸಿರುತ್ತಾರೆ.






