ಮಂಗಳೂರು :ಶಸ್ತ್ರಚಿಕಿತ್ಸೆ ನಡೆಯುತ್ತಿದ್ದ ವೇಳೆ ಹೃದಯಾಘಾತ ಸಂಭವಿಸಿ ಯುವಕನೋರ್ವ ಮೃತಪಟ್ಟ ದಾರುಣ ಘಟನೆ ಮಂಗಳೂರು ನಗರದಲ್ಲಿ ಶನಿವಾರ ನಡೆದಿದೆ.

ಕಡಬ ತಾಲೂಕಿನ ಕರ್ಮಾಯಿ ನಿವಾಸಿ ಜಾರ್ಜ್ ಎಂಬವರ ಪುತ್ರ ಜೈಸನ್ ಜಾರ್ಜ್ ಮೃತ ಯುವಕನಾಗಿದ್ದಾನೆ.

ಅನಾರೋಗ್ಯದಿಂದ ಬಳಲುತ್ತಿದ್ದ ಈತನನ್ನು ಚಿಕಿತ್ಸೆಗಾಗಿ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು.

ಶನಿವಾರದಂದು ಶಸ್ತ್ರಚಿಕಿತ್ಸೆ ನಡೆಯುತ್ತಿದ್ದ ವೇಳೆ ಹೃದಯಾಘಾತ ಸಂಭವಿಸಿ ಜೈಸನ್ ಮೃತಪಟ್ಟಿರುವುದಾಗಿ ತಿಳಿದುಬಂದಿದೆ. ಮೃತ ಜೈಸನ್ ತಂದೆ, ತಾಯಿ, ಸಹೋದರಿ ಸೇರಿದಂತೆ ಅಪಾರ ಬಂಧು ಬಳಗವನ್ನು ಅಗಲಿದ್ದಾರೆ.

Leave a Reply

Your email address will not be published. Required fields are marked *

Join WhatsApp Group
error: Content is protected !!