ಬಂಟ್ವಾಳ: ಖಾಸಗಿ ಬಸ್ ಮತ್ತು ಬೈಕ್ ನಡುವೆ ಡಿಕ್ಕಿ ಸಂಭವಿಸಿದ್ದು
ಓರ್ವ ಸಾವನ್ನಪ್ಪಿದ್ದು ಇನ್ನೋರ್ವ ಗಂಭೀರವಾಗಿ ಗಾಯಗೊಂಡು ಮಂಗಳೂರು ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದು ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ.

ಕಡೆಗೋಳಿ ನಿವಾಸಿ ಪ್ರವೀಣ (30) ಸ್ಥಳದಲ್ಲಿಯೇ ಮೃತಪಟ್ಟ ವ್ಯಕ್ಯಿಯಾಗಿದ್ದು, ಸ್ನೇಹಿತ ಸಂದೀಪ ಗಂಭೀರವಾಗಿ ಗಾಯಗೊಂಡಿದ್ದಾನೆ.

ಕೆಲಸವನ್ನು ಮುಗಿಸಿ ಮನೆಗೆ ಜೊತೆಯಾಗಿ ಪ್ರಯಾಣಿಸುತ್ತಿದ್ದ ವೇಳೆ ಬಸ್ ಡಿಕ್ಕಿಯಾಗಿದೆ.

ರಾಷ್ಟ್ರೀಯ ಹೆದ್ದಾರಿ ಮಂಗಳೂರು ‌ಬೆಂಗಳೂರು ರಸ್ತೆಯ ತುಂಬೆ ಸಮೀಪದ ‌ಕಡೆಗೋಳಿ ಎಂಬಲ್ಲಿ ಮಂಗಳೂರಿನಿಂದ ಬಿಸಿರೋಡಿನ ಕಡೆಗೆ ಬರುತ್ತಿದ್ದ ಖಾಸಗಿ ಬಸ್ ಬೈಕ್ ನಡುವೆ ಡಿಕ್ಕಿಯಾಗಿದೆ.

ಬಸ್ ಚಾಲಕನ ಮೇಲೆ ಮೆಲ್ಕಾರ್ ಟ್ರಾಫಿಕ್ ಪೋಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
‌‌ಸ್ಥಳಕ್ಕೆ ಟ್ರಾಫಿಕ್ ಎಸ್.ಐ.ಸುತೇಶ್ ಬೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

Leave a Reply

Your email address will not be published. Required fields are marked *

Join WhatsApp Group
error: Content is protected !!