ಹಾ ಸನ, ನ.5: ಕಾನ್ ಸ್ಟೇಬಲ್ ನನ್ನು ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಕೊಚ್ಚಿ ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಹಾಸನ ತಾಲೂಕಿನ ದುದ್ದ ಗ್ರಾಮದ ಹೊರವಲಯದಲ್ಲಿರುವ ಡಾಬಾ ಸರ್ಕಲ್ನಲ್ಲಿ ರವಿವಾರ ರಾತ್ರಿ ನಡೆದಿದೆ.ಬಾಗೇಶಪುರ ಗ್ರಾಮದ ಪೊಲೀಸ್ ಕಾನ್ ಸ್ಟೇಬಲ್ ಹರೀಶ್ ವಿ.(32) ಕೊಲೆಯಾದವರು.

ಇವರು ಕರ್ನಾಟಕ ಕೈಗಾರಿಕಾ ಭದ್ರತಾ ಪಡೆಯ ಕಾನ್ಸ್ಟೇಬಲ್ ಆಗಿದ್ದರು.

ಹರೀಶ್ ಅವರ ವಿವಾಹವು ನ.11ರಂದು ನಿಗದಿಯಾಗಿತ್ತು. ಈ ಹಿನ್ನೆಲೆಯಲ್ಲಿ ಅವರು ವಿವಾಹ ಆಮಂತ್ರಣ ಪತ್ರಿಕೆಗಳನ್ನು ಸಂಬಂಧಿಕರಿಗೆ ಹಂಚಿ ಕಳೆದ ರಾತ್ರಿ ಮನೆಗೆ ಬೈಕಿನಲ್ಲಿ ಹಿಂದಿರುಗುತ್ತಿದ್ದ ಈ ಕೃತ್ಯ ಎಸಗಲಾಗಿದೆ. ದುಷ್ಕರ್ಮಿಗಳು ಅವರ ಬೈಕಿನ ಮೇಲೆ ದಾಳಿ ನಡೆಸಿ ಮಾರಕಾಸ್ತ್ರಗಳಿಂದ ಕೊಚ್ಚಿ ಪರಾರಿಯಾಗಿದ್ದಾರೆ. ಗಂಭೀರವಾಗಿ ಗಾಯಗೊಂಡಿದ್ದ ಅವರು ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾರೆ.

ಈ ಕುರಿತು ದುದ್ದ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಕೈಗೆತ್ತಿಕೊಂಡಿದ್ದಾರೆ.

ಘಟನಾ ಸ್ಥಳಕ್ಕೆ ಹಾಸನ ಎಸ್ಪಿ ಮುಹಮ್ಮದ್ ಸುಜೇತಾ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Leave a Reply

Your email address will not be published. Required fields are marked *

Join WhatsApp Group
error: Content is protected !!