ಮಂಗಳೂರು :ನವೆಂಬರ್ 06: ತುಂಬೆಯ ಕಡೆಗೋಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಾನುವಾರ ನಡೆದಿದ್ದ ಭೀಕರ ರಸ್ತೆ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಮತ್ತೊಬ್ಬ ಯುವಕ ಚಿಕಿತ್ಸೆ ಫಲಕಾರಿಯಾಗದೇ ಸಾವನಪ್ಪಿದ್ದಾರೆ.

ಮಂಗಳೂರಿನಿಂದ ಬಿಸಿರೋಡಿನ ಕಡೆಗೆ ತೆರಳುತ್ತಿದ್ದ ಖಾಸಗಿ ಬಸ್ ಮುಂದಿನಿಂದ ಸಾಗುತ್ತಿದ್ದ ಬೈಕ್ ಸವಾರರಿಬ್ಬರಿಗೆ ಡಿಕ್ಕಿಯಾಗಿತ್ತು.

ರೊಟ್ಟಿಗುಡ್ಡೆ ನಿವಾಸಿ ಪ್ರವೀಣ್(34) ಸ್ಥಳದಲ್ಲೇ ಸಾವನ್ನಪ್ಪಿದ್ದರೆ, ತೀವ್ರ ಗಾಯಗೊಂಡಿದ್ದ ಸಂದೀಪ್ (35) ಮಂಗಳೂರು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಸಾವನಪ್ಪಿದ್ದಾರೆ. ಬಸ್ ಚಾಲಕನ ಅತಿ ವೇಗ ಮತ್ತು ನಿರ್ಲಕ್ಷ್ಯದ ಚಾಲನೆಯಿಂದ ಅಪಘಾತ ಆಗಿತ್ತೆಂದು ದೂರು ಕೇಳಿಬಂದಿದೆ.

ಇದೇ ಊರಿನ ಮತ್ತೊಬ್ಬರು ಅಕ್ಟೋಬರ್ 31 ರಂದು ಭೀಕರ ರಸ್ತೆ ಅಪಘಾತದಲ್ಲಿ ಸಾವನಪ್ಪಿದ್ದರು. ಇದೀಗ ಒಂದೇ ಊರಿನ ಮೂವರ ಸಾವು ಗ್ರಾಮದಲ್ಲಿ ಅಕ್ಷರಶಃ ಸೂತಕದ ಛಾಯೆ ಮನೆ ಮಾಡಿದೆ. ಹಠಾತ್‌ ಆಗಿ ನಡೆದ ದುರಂತದಿಂದಾಗಿ ಊರಿನಲ್ಲಿ ನೀರವ ಮೌನ ಆವರಿಸಿದೆ

Leave a Reply

Your email address will not be published. Required fields are marked *

Join WhatsApp Group
error: Content is protected !!