ಸುಳ್ಯ :ಉಬರಡ್ಕ ಗ್ರಾಮದ ಸೂಂತೋಡು ತಿರುವೊಂದರಲ್ಲಿ ಕೆ.ಎಸ್.ಆರ್.ಟಿ.ಸಿ. ಬಸ್ ಹಾಗೂ ಸ್ಕೂಟಿ ಅಪಘಾತವಾಗಿ ಸಹೋದರಿಯರಿಬ್ಬರು ಗಂಭೀರ ಗಾಯಗೊಂಡಿದ್ದು, ಒಬ್ಬರು ಮೃತಪಟ್ಟ ಘಟನೆ ವರದಿಯಾಗಿದೆ.

ಇಂದು ಸಂಜೆ ಸುಳ್ಯದಿಂದ ಉಬರಡ್ಕಕ್ಕೆ ಸ್ಕೂಟಿಯಲ್ಲಿ ಕಾಡುತೋಟದ ಸಹೋದರಿಯರಾದ ರಚನಾ ಮತ್ತು ಅನನ್ಯ ತೆರಳುತಿದ್ದಾಗ, ಸೂಂತೋಡು ಬಳಿ ಎದುರಿನಿಂದ ಬಂದ ಬಸ್‌ ಪರಸ್ಪರ ಢಿಕ್ಕಿಯಾಯಿತು. ಪರಿಣಾಮ ರಚನಾ ಗಂಭೀರ ಗಾಯಗೊಂಡಿದ್ದು ಸುಳ್ಯ ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಆ ವೇಳೆಗೆ ಕೊನೆಯುಸಿರೆಳೆದರೆಂದು ತಿಳಿದುಬಂದಿದೆ. ಅನನ್ಯರ ಕಾಲಿಗೆ ಗಂಭೀರ ಗಾಯವಾಗಿದೆ.

ರಚನಾ ಪುತ್ತೂರು ವಿವೇಕಾನಂದ ಕಾಲೇಜಿನಲ್ಲಿ ವಿದ್ಯಾರ್ಥಿನಿಯಾಗಿದ್ದರು.

ಗ್ರಾಮ ಆಡಳಿತಾಧಿಕಾರಿ ಪರೀಕ್ಷೆ ಬರೆದು ಉತೀರ್ಣರಾಗಿದ್ದ ರಚನಾ ಸರಕಾರಿ ಉದ್ಯೋಗದ ನಿರೀಕ್ಷೆಯಲ್ಲಿದ್ದರು.

ಮೃತ ರಚನಾ ಅವರ ಪಾರ್ಥೀವ ಶರೀರದ ಅಂತ್ಯಕ್ರಿಯೆ ಶನಿವಾರ ಬೆಳಿಗ್ಗೆ ಕಾಡುತೋಟ ಮನೆಯಲ್ಲಿ ನಡೆಯಲಿದೆ ಎಂದು ತಿಳಿದುಬಂದಿದೆ.

Leave a Reply

Your email address will not be published. Required fields are marked *

Join WhatsApp Group
error: Content is protected !!