ಪುತ್ತೂರು :ಕೆಲ ದಿನಗಳ ಹಿಂದೆ ಎಡನೀರು ಸ್ವಾಮಿಗಳ ಕಾರಿನ ಮೇಲೆ ಕೆಲ ವ್ಯಕ್ತಿಗಳಿಂದ ಹಲ್ಲೆಗೆ ಮುಂದಾದ ಘಟನೆ ನಡೆದಿತ್ತು ಈ ಹಿನ್ನಲೆಯಲ್ಲಿ ವಿಶ್ವ ಹಿಂದೂ ಪರಿಷದ್ ನ ಪ್ರಾಂತ ಉಪಾಧ್ಯಕ್ಷ ಯು . ಪೂವಪ್ಪ, ಜಿಲ್ಲಾಧ್ಯಕ್ಷ ಡಾ.ಕೃಷ್ಣ ಪ್ರಸನ್ನ, ಪುತ್ತೂರು ನಗರ ಅಧ್ಯಕ್ಷ ದಾಮೋದರ ಪಾಟಾಳಿ ಎಡನೀರು ಮಠದಲ್ಲಿ ಸ್ವಾಮೀಜಿಯವರನ್ನು ಭೇಟಿಯಾಗಿ ಕೆಲ ದಿನಗಳ ಹಿಂದೆ ನಡೆದ ಅಹಿತಕರ ಘಟನೆಯ ಬಗ್ಗೆ ಚರ್ಚಿಸಿದರು.

ಹಿಂದೂ ಸಮಾಜದ ಯತಿಗಳಿಗೆ ಯಾವುದೇ ತೊಂದರೆಯಾದಲ್ಲಿ ವಿಶ್ವ ಹಿಂದೂ ಪರಿಷತ್ತು ಖಂಡಿಸುತ್ತದೆ ಹಾಗೂ ಅವರ ಬೆಂಬಲಕ್ಕೆ ನಿಲ್ಲುತ್ತದೆ. ಇಂತಹ ಘಟನೆಯ ಮರುಕಳಿಸದಂತೆ ಕೇರಳ ಸರ್ಕಾರ ಕ್ರಮ ಕೈಗೊಳ್ಳಬೇಕು ಹಾಗೂ ತಪ್ಪಿತಸ್ಥರನ್ನು ಕೂಡಲೇ ಬಂಧಿಸಿ ಶಿಕ್ಷೆಗೊಳಪಡಿಸಬೇಕು ಎಂದು ಆಗ್ರಹಿಸಿದ್ದಾರೆ

Leave a Reply

Your email address will not be published. Required fields are marked *

Join WhatsApp Group
error: Content is protected !!