ಕಲಬುರಗಿ ಜಿಲ್ಲೆಯಲ್ಲಿ ಬೆಳ್ಳಂಬೆಳಗ್ಗೆ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಗೂಡ್ಸ್ ವಾಹನ ಹಾಗೂ ಕಾರಿನ ನಡುವೆ ಡಿಕ್ಕಿಯಾಗಿ ನಾಲ್ವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

ಕಲಬುರಗಿ ಜಿಲ್ಲೆಯ ಕಮಲಾಪುರ ತಾಲೂಕಿನ ಮರಗುತ್ತಿ ಕ್ರಾಸ್ ಬಳಿ ಗೂಡ್ಸ್ ವಾಹನ ಹಾಗೂ ಕಾರಿನ ನಡುವೆ ಡಿಕ್ಕಿಯಾದ ಪರಿಣಾಮ ಕಾರಿನಲ್ಲಿದ್ದ ನಾಲ್ವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

ಮೃತರನ್ನು ಹೈದರಾಬಾದ್ ಮೂಲದ ಭಾರ್ಗವ್ ಕೃಷ್ಣ (55), ಸಂಗೀತ (45), ಉತ್ತಮ್ ರಾಘವನ್ (28) ಹಾಗೂ ಕಾರು ಚಾಲಕ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.


https://twitter.com/bigtvtelugu/status/1855087789882458610?ref_src=twsrc%5Etfw%7Ctwcamp%5Etweetembed%7Ctwterm%5E1855087789882458610%7Ctwgr%5E398372609b736c0ffecff0b6aecf7ee26321b635%7Ctwcon%5Es1_c10&ref_url=http%3A%2F%2Fapi-news.dailyhunt.in%2F

Leave a Reply

Your email address will not be published. Required fields are marked *

Join WhatsApp Group
error: Content is protected !!