ಮಂಗಳೂರು, ನವೆಂಬರ್ 09: ಪತ್ನಿ ಮತ್ತು ಮಗನನ್ನು ಚೂರಿಯಿಂದ ಇರಿದು ಕೊಂದು (Kills) ನಂತರ ರೈಲಿಗೆ ತಲೆಕೊಟ್ಟು ಪತಿ ಆತ್ಮಹತ್ಯೆ ಮಾಡಿಕೊಂಡಿರುವಂತಹ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಮುಲ್ಕಿ ತಾಲೂಕಿನ ಪಕ್ಷಿಕೆರೆ ಗ್ರಾಮದಲ್ಲಿ ನಡೆದಿದೆ. ಪತ್ನಿ ಪ್ರಿಯಾಂಕಾ(28), ಪುತ್ರ ಹೃದಯ್(4) ಕೊಲೆ ಮಾಡಿ ಕಾರ್ತಿಕ್ ಭಟ್(32) ಕೂಡ ಆತ್ಮಹತ್ಯೆಗೆ ಶರಣಾಗಿದ್ದಾರೆ. ಕೌಟುಂಬಿಕ ಸಮಸ್ಯೆಯಿಂದ ಹತ್ಯೆ ಮಾಡಿರುವ ಶಂಕೆ ವ್ಯಕ್ತವಾಗಿದೆ. ಮುಲ್ಕಿ ಠಾಣಾ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ಸಹಕಾರಿ ಬ್ಯಾಂಕ್ನಲ್ಲಿ ಉದ್ಯೋಗ ಮಾಡಿಕೊಂಡಿದ್ದ ಕಾರ್ತಿಕ್ ಭಟ್ ನಿನ್ನೆಯೇ ಪತ್ನಿ, ಮಗನನ್ನು ಕೊಂದು ಬಳಿಕ ತಾವು ಮುಲ್ಕಿ ಹೊರವಲಯದ ಬೆಳ್ಳಾಯುರುವಿನಲ್ಲಿ ರೈಲಿಗೆ ಸಿಲುಕಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಕಾರ್ತಿಕ್ ಫ್ಲ್ಯಾಟ್ ಬಳಿಗೆ ಪೊಲೀಸರು ಬಂದಾಗ ಪತ್ನಿ, ಪುತ್ರನ ಶವ ಪತ್ತೆ ಆಗಿದೆ.

ಕೌಟುಂಬಿಕ ಸಮಸ್ಯೆಯಿಂದ ಹತ್ಯೆ ಮಾಡಿರುವ ಶಂಕೆ

ಸೊಸೆ ಮತ್ತು ಮೊಮ್ಮಗನ ಮೃತದೇಹ ಮನೆಯಲ್ಲಿದ್ದರೂ ವೃದ್ಧ ಅತ್ತೆ ಮಾವನಿಗೆ ಗೊತ್ತೆ ಆಗಿಲ್ಲ. ಕಾರ್ತಿಕ್ ಪತ್ನಿಗೆ ತನ್ನ ಮಾವ ಅತ್ತೆಯೊಂದಿಗೆ ಮನಸ್ತಾಪವಿದ್ದ ಮಾಹಿತಿ ಇದೆ. ಮನೆಯ ಕೋಣೆಯಲ್ಲಿ ಮತೃ ಕಾರ್ತಿಕ್ ಕುಟುಂಬ ಪ್ರತ್ಯೇಕವಾಗಿದ್ದು, ಇಡೀ ದಿನ ಮನೆಯ ಕೋಣೆಯಲ್ಲೇ ಇರುತ್ತಿದ್ದರು ಎನ್ನಲಾಗಿದೆ.

ಇನ್ನು ಮೃತ ಕಾರ್ತಿಕ್ ತಂದೆ ಜನಾರ್ದನ ಭಟ್ ಪಕ್ಷಿಕೆರೆ ಜಂಕ್ಷನ್ಲ್ಲಿ ಹೋಟೆಲ್ ನಡೆಸುತ್ತಿದ್ದರು. ನಿನ್ನೆ ಬೆಳಗ್ಗೆಯೂ ಮನೆಯಿಂದ ಹೋಟೆಲ್ಗೆ ತೆರಳಿದ್ದರು. ಈ ವೇಳೆ ಹೆಂಡತಿ ಮತ್ತು ಮಗುವನ್ನು ಕೋಣೆಯೊಳಗೆ ಕಾರ್ತಿಕ್ ಹತ್ಯೆ ಮಾಡಿದ್ದಾರೆ.

ನಿನ್ನೆ ರಾತ್ರಿಯೂ ಮಗ, ಸೊಸೆ ಮತ್ತು ಮೊಮ್ಮಗ ಕೋಣೆಯಲ್ಲಿಯೇ ಇದ್ದಾರೆಂದು ಮಾವ ಜನಾರ್ದನ ಭಾವಿಸಿದ್ದರು. ಇಂದು ಬೆಳಗ್ಗೆ ಕೂಡ ಎಂದಿನಂತೆ ಅವರು ಹೋಟೆಲ್ಗೆ ತೆರಳಿದ್ದಾರೆ. ಮಧ್ಯಾಹ್ನ ಕಾರ್ತಿಕ್ ವಿಳಾಸ ಹುಡುಕಿಕೊಂಡು ಪಕ್ಷಿಕೆರೆಯ ಮನೆಗೆ ಪೊಲೀಸರು ಬಂದಿದ್ದಾರೆ. ಮನೆಯ ಕೋಣೆಯ ಬಾಗಿಲು ತೆರೆದಾಗ ಕಾರ್ತಿಕ್ ಪತ್ನಿ, ಮಗ ಮೃತದೇಹ ಪತ್ತೆ ಆಗಿದೆ.

Leave a Reply

Your email address will not be published. Required fields are marked *

Join WhatsApp Group
error: Content is protected !!