ಮಂಗಳೂರು : ಉಳ್ಳಾಲ ಸಮೀಪದ ತೊಕ್ಕೊಟ್ಟು -ಮಂಗಳೂರು ವಿಶ್ವವಿದ್ಯಾಲಯ ರಸ್ತೆಯ ಚೆಂಬುಗುಡ್ಡೆ ಕೆರೆಬೈಲು ಬಳಿ ಶನಿವಾರ ಸಂಜೆ ಟ್ಯಾಂಕರ್ ಮತ್ತು ಸ್ಕೂಟರ್ ನಡುವೆ ಸಂಭವಿಸಿದ ಅಪಘಾತದಲ್ಲಿ ಮಹಿಳೆಯೊಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ದೇರಳಕಟ್ಟೆಯ ಖಾಸಗಿ ಆಸ್ಪತ್ರೆ ಸಿಬ್ಬಂದಿ ರಶೀದ್ ಅವರ ಪತ್ನಿ ರೆಹ್ಮತ್(47) ಮೃತಪಟ್ಟವರು ಎಂದು ಹೇಳಲಾಗಿದೆ.

ದೇರಳಕಟ್ಟೆ ಕಡೆಯಿಂದ ಸ್ಕೂಟರ್ ನಲ್ಲಿ ತೊಕ್ಕೊಟ್ಟು ಕಡೆಗೆ ದಂಪತಿ ಬರುತ್ತಿದ್ದ ವೇಳೆಯಲ್ಲಿ ರಸ್ತೆಯಲ್ಲಿದ್ದ ಗುಂಡಿ ತಪ್ಪಿಸುವ ಹಂತದಲ್ಲಿ ಟ್ಯಾಂಕರ್ ಡಿಕ್ಕಿ ಹೊಡೆದಿದೆ ಎನ್ನಲಾಗಿದೆ.

ಗಂಭೀರವಾಗಿ ಗಾಯಗೊಂಡಿರುವ ರಶೀದ್ ಅವರನ್ನು ದೇರಳಕಟ್ಟೆಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ತೊಕ್ಕೊಟ್ಟು ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ರಸ್ತೆ ಸರಿಯಿಲ್ಲದಿರುವುದೇ ಅಪಘಾತಕ್ಕೆ ಕಾರಣ ಎಂದು ಆಕ್ರೋಶ ವ್ಯಕ್ತಪಡಿಸಿದ ಸ್ಥಳೀಯರು ಪ್ರತಿಭಟನೆ ನಡೆಸಿದ್ದಾರೆ. ಇದರಿಂದಾಗಿ ಒಂದು ಗಂಟೆಗೂ ಅಧಿಕಕಾಲ ವಾಹನಗಳ ಸಂಚಾರಕ್ಕೆ ಅಡ್ಡಿಯಾಗಿತ್ತು.

Leave a Reply

Your email address will not be published. Required fields are marked *

Join WhatsApp Group
error: Content is protected !!