ಮಂಗಳೂರು : ಲಿಮ್ಕಾ ಬುಕ್ ಆಫ್ ರೆಕಾರ್ಡ್ ನಲ್ಲಿ ದಾಖಲೆ ಹೊಂದಿದ್ದ ಮಂಗಳೂರಿನ ಪುಟಾಣಿ ಪೂರ್ವಿ (7) ಅನಾರೋಗ್ಯದಿಂದ ಮಂಗಳೂರಿನಲ್ಲಿ ನಿಧನರಾಗಿದ್ದಾರೆ.

ಮಂಗಳೂರು ದ್ವಾರಕ ನಗರ ಕೊಟ್ಟಾರ ನಿವಾಸಿಗಳಾದ ಪುಷ್ಪರಾಜ್‌ ಎಸ್‌. ಕುಂದರ್‌ ವೈಶಾಲಿ ಎಲ್‌. ಬೆಂಗ್ರೆ ಅವರ ಪುತ್ರಿ ಪೂರ್ವಿ 2019ರಲ್ಲಿ 1 ನಿಮಿಷದಲ್ಲಿ ದಾಖಲೆಯ ರೈಮ್ಸ್‌ ಆಟವಾಡಿ ಇಂಡಿಯನ್‌ ಬುಕ್‌ ಆಫ್‌ ರೆಕಾಡ್ಸ್‌ನಲ್ಲಿ ಹೆಸರು ಮಾಡಿದ್ದಳು.

ಸಣ್ಣ ಪ್ರಾಯದಲ್ಲೇ ಚುರುಕಿನಿಂದ ಕೂಡಿದ್ದ ಪೂರ್ವಿ ಫುಟ್‌ಬಾಲ್‌, ಭರತನಾಟ್ಯದಲ್ಲಿ ತನ್ನ ಸಾಮರ್ಥ್ಯ ಪ್ರದರ್ಶಿಸಿ ಜನರ ಪ್ರೀತಿಗೆ ಪಾತ್ರವಾಗಿದ್ದಳು. ವಿವಿಧ ಸಂಘ ಸಂಸ್ಥೆಯಿಂದ ಸಮ್ಮಾನ ಪಡೆದುಕೊಂಡಿದ್ದಳು.

ಗ್ರೀನ್‌ ವುಡ್‌ ಇಂಟರ್‌ನ್ಯಾಷನಲ್‌ ಶಾಲೆಯಲ್ಲಿ ಕಲಿಯುತ್ತಿದ್ದ ಪೂರ್ವಿ ಅನಾರೋಗ್ಯಕ್ಕೀಡಾದಾಗ ಮಂಗಳೂರಿಗೆ ಬಂದು ಖಾಸಗಿ ಆಸ್ಪತ್ರೆಗೆ ಪೋಷಕರು ದಾಖಲಿಸಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಸಾವನಪ್ಪಿದ್ದಾರೆ.

Leave a Reply

Your email address will not be published. Required fields are marked *

You missed

Join WhatsApp Group
error: Content is protected !!