ಬೆಳ್ತಂಗಡಿ: ಶ್ರೀ ಕ್ಷೇತ್ರ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ.ಟ್ರಸ್ಟ್ ವತಿಯಿಂದ ನ.14ರಂದು ಬೆಳಗ್ಗೆ 10 ಗಂಟೆಗೆ ಧರ್ಮಸ್ಥಳದ ಅಮೃತ ವರ್ಷಿಣಿಯಲ್ಲಿ ನಡೆಯ ಲಿರುವ ಗ್ರಾಮಾಭಿವೃದ್ಧಿ ಯೋಜನೆಯ ಸ್ವಸಹಾಯ ಸಂಘಗಳ ಸದಸ್ಯರಿಗೆ ಲಾಭಾಂಶ ವಿತರಣೆ ಕಾರ್ಯಕ್ರಮವನ್ನು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಉದ್ಘಾಟಿಸಲಿದ್ದಾರೆ ಎಂದು ಎಸ್.ಕೆ.ಡಿ.ಆರ್.ಡಿ.ಪಿ. ಮುಖ್ಯ ಕಾರ್ಯನಿರ್ವಹಣಾಧಿಕಾರಿ ಅನಿಲ್ ಕುಮಾರ್ ಎಸ್.ಎಸ್. ತಿಳಿಸಿದ್ದಾರೆ.
ಧರ್ಮಾಧಿಕಾರಿ ಡಾ| ಡಿ.ವೀರೇಂದ್ರ ಹೆಗ್ಗಡೆ ಅಧ್ಯಕ್ಷತೆ ವಹಿಸಲಿದ್ದಾರೆ. ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್, ನಬಾರ್ಡ್ ಬ್ಯಾಂಕ್ ಅಧ್ಯಕ್ಷ ಶಾಜಿ. ಕೆ.ವಿ. ಮುಂಬಯಿ, ಗ್ರಾಮಾಭಿವೃದ್ಧಿ ಯೋಜನೆಯ ಜ್ಞಾನವಿಕಾಸ ಕಾರ್ಯಕ್ರಮದ ಅಧ್ಯಕ್ಷೆ ಹೇಮಾವತಿ ವೀ. ಹೆಗ್ಗಡೆ, ಸಂಸದ ಕ್ಯಾ| ಬ್ರಿಜೇಶ್ ಚೌಟ, ಶಾಸಕ ಹರೀಶ್ ಪೂಂಜ ಮುಂತಾದವರು ಭಾಗವಹಿಸಲಿದ್ದಾರೆ ಎಂದು ತಿಳಿಸಿದ್ದಾರೆ.
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯನ್ನು ಒಂದು ಲಾಭರಹಿತ ಉದ್ದೇಶದೊಂದಿಗೆ ಚಾರಿಟೆಬಲ್ ಟ್ರಸ್ಟ್ ಆಗಿ ಧರ್ಮಾಧಿಕಾರಿ ಡಾ| ಡಿ. ವೀರೇಂದ್ರ ಹೆಗ್ಗಡೆಯವರು ಸ್ಥಾಪಿಸಿದ್ದಾರೆ. ನಾಲ್ಕು ದಶಕಗಳಿಂದ ಸಂಸ್ಥೆಯು ಗ್ರಾಮೀಣ ಪ್ರದೇಶದ ರೈತರು, ಮಹಿಳೆಯರು ಮತ್ತು ಬಡವರ ಆರ್ಥಿಕ ಹಾಗೂ ಸಾಮಾಜಿಕ ಸಬಲೀಕರಣಕ್ಕೆ ಶ್ರಮಿಸುತ್ತಿದೆ