ಪುತ್ತೂರು :ಹಿಂಗಾರು ಚುರುಕುಗೊಂಡಿದ್ದು, ಕರಾವಳಿಯಲ್ಲಿ ಗುರುವಾರ ಸಂಜೆ ಬಳಿಕ ಗುಡುಗು ಸಹಿತ ಉತ್ತಮ ಮಳೆ ಸುರಿದಿದೆ.
ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು,ಬೆಳ್ತಂಗಡಿ, ಧರ್ಮಸ್ಥಳ, ಕಡಬ, ಮಂಗಳೂರು ಸಹಿತ ಜಿಲ್ಲೆಯ ಹಲವೆಡೆ ಮಳೆಯಾಗಿದೆ.
ಬೆಳಗ್ಗಿನಿಂದ ಸಂಜೆಯವರೆಗೆ ಬಿಸಿಲು ಮತ್ತು ಮೋಡದಿಂದ ಕೂಡಿದ ವಾತಾವರಣ ಇತ್ತು. ಜಿಲ್ಲೆಯಲ್ಲಿ ಗರಿಷ್ಠ ತಾಪಮಾನ ಏರಿಕೆಯಾಗಿ ಸೆಕೆಯ ಬೇಗೆ ಹೆಚ್ಚು ಇತ್ತು. ಮಂಗಳೂರಿನಲ್ಲಿ 34.9 ಡಿ.ಸೆ. ಗರಿಷ್ಠ ತಾಪಮಾನ ದಾಖಲಾಗಿ ವಾಡಿಕೆಗಿಂತ 2.1 ಡಿ.ಸೆ. ಏರಿಕೆ ಮತ್ತು 25.4 ಡಿ.ಸೆ. ಕನಿಷ್ಠ ತಾಪಮಾನ ದಾಖಲಾಗಿ ವಾಡಿಕೆಗಿಂತ 2.8 ಡಿ.ಸೆ. ಏರಿಕೆ ಕಂಡಿತ್ತು. ಮುಂದಿನ ಎರಡು ದಿನ ಜಿಲ್ಲೆಯಲ್ಲಿ ಸಾಧಾರಣ ಮಳೆ ಸುರಿಯುವ ಸಾಧ್ಯತೆ ಇದೆ