
ಉಪ್ಪಿನಂಗಡಿ, ನ.14: ಉಪ್ಪಿನಂಗಡಿಯ ಸನ್ಮಾನ್ ಹೊಟೇಲ್ ಮಾಲಕ ಆದಂ ಹಾಜಿ ಸನ್ಮಾನ್ (76) ಗುರುವಾರ ರಾತ್ರಿ ಹೃದಯಾಘಾತದಿಂದ ನಿಧನರಾಗಿದ್ದಾರೆ.
ಮೃತರು ಪತ್ನಿ, ಇಬ್ಬರು ಪುತ್ರರು, ಮೂವರು ಪುತ್ರಿಯರು ಹಾಗೂ ಅಪಾರ ಬಂಧುಬಳಗವನ್ನು ಅಗಲಿದ್ದಾರೆ.
ವಿವಿಧ ಸಾಮಾಜಿಕ ಚಟುವಟಿಕೆಗಳಲ್ಲಿ ಸಕ್ರಿಯರಾಗಿದ್ದ ಆದಂ ಹಾಜಿಯವರು ಉಪ್ಪಿನಂಗಡಿ ಪರಿಸರದಲ್ಲಿ ಜನಾನುರಾಗಿಯಾಗಿದ್ದರು.






