ಪುತ್ತೂರು: ಅನುಮತಿ ಪಡೆದ ವಿದ್ಯುತ್ ಗುತ್ತಿಗೆದಾರರ ಸಂಘ ಬೆಂಗಳೂರು ದ.ಕ.ಜಿಲ್ಲಾ ಸಮಿತಿ, ಪುತ್ತೂರು ಉಪಸಮಿತಿ ವತಿಯಿಂದ ಕರ್ನಾಟಕ ರಾಜ್ಯ ಅನುಮತಿ ಪಡೆದ ವಿದ್ಯುತ್ ಗುತ್ತಿಗೆದಾರರ ಸಂಘದ ಸ್ಥಾಪಕಾಧ್ಯಕ್ಷ ಎನ್‍.ಬಾಲಕೃಷ್ಣ ಕೊಳತ್ತಾಯ ಅವರ 80ನೇ ವರ್ಷಾಚರಣೆ ಪ್ರಯುಕ್ತ ಸಾರ್ವಜನಿಕ ಸನ್ಮಾನ ಹಾಗೂ ಗೌರವಾರ್ಪಣೆ ನ.16 ಶನಿವಾರ ಪುತ್ತೂರು ರೋಟರಿ ಮನಿಷಾ ಸಭಾಂಗಣದಲ್ಲಿ ನಡೆಯಲಿದೆ ಎಂದು ಪುತ್ತೂರು ವಿದ್ಯುತ್ ಗುತ್ತಿಗೆದಾರರ ಸಂಘದ ಅಧ್ಯಕ್ಷ ಸೂರ್ಯನಾಥ ಆಳ್ವ ತಿಳಿಸಿದ್ದಾರೆ.
ಗುರುವಾರ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿ, ಶ್ರೀ ಕ್ಷೇತ್ರ ಎಡನೀರು ಮಠದ ಶ್ರೀ ಸಚ್ಚಿದಾನಂದ ಸ್ವಾಮೀಜಿ ಆಶೀರ್ವಚನ ನೀಡಲಿದ್ದು, ಪುತ್ತೂರು ವಿದ್ಯುತ್ ಗುತ್ತಿಗೆದಾರರ ಸಂಘದ ಅಧ್ಯಕ್ಷ ಸೂರ್ಯನಾಥ ಆಳ್ವ ಅಧ್ಯಕ್ಷತೆ ವಹಿಸುವರು. ಮುಖ್ಯ ಅತಿಥಿಗಳಾಗಿ ಶಾಸಕ ಅಶೋಕ್ ಕುಮಾರ್ ರೈ, ವಿಧಾನ ಪರಿಷತ್ ಸದಸ್ಯ ಕಿಶೋರ್ ಕುಮಾರ್ ಪುತ್ತೂರು, ಮೆಸ್ಕಾಂ ಮ್ಯಾನೆಜಿಂಗ್ ಡೈರೆಕ್ಟರ್ ಡಿ.ಪದ್ಮಾವತಿ, ಅನುಮತಿ ಪಡೆದ ವಿದ್ಯುತ್ ಗುತ್ತಿಗೆದಾರರ ಸಂಘದ ದ.ಕ.ಜಿಲ್ಲಾ ಉಪಾಧ್ಯಕ್ಷ ಉರ್ಬನ್ ಪಿಂಟೋ, ಪುತ್ತೂರು ಛೇಂಬರ್ ಆಫ್‍ ಕಾಮರ್ಸ್‍ ಅಧ್ಯಕ್ಷ ವಾಮನ್ ಪೈ ಪಾಲ್ಗೊಳ್ಳಲಿದ್ದಾರೆ ಎಂದು ಅವರು ತಿಳಿಸಿದರು.
ಪತ್ರಿಕಾಗೋಷ್ಠಿಯಲ್ಲಿ ಸಂಘದ ಕಾರ್ಯದರ್ಶಿ ಅಶೋಕ್‍ ಪ್ರಶಾಂತ್‍, ಕೋಶಾಧಿಕಾರಿ ಸಜಿತ್ ಕುಮಾರ್ ರೈ, ಉಪಾಧ್ಯಕ್ಷ ಕೃಷ್ಣಪ್ರಶಾಂತ್, ಮಾಜಿ ಅಧ್ಯಕ್ಷ ಮಹಾದೇವ ಶಾಸ್ತ್ರಿ ಮಣಿಲ ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

Join WhatsApp Group
error: Content is protected !!