ನ ಟ ರಿಷಬ್ ಶೆಟ್ಟಿಯವರ ಬಹು ನಿರೀಕ್ಷಿತ ‘ಕಾಂತಾರ: ಅಧ್ಯಾಯ 1’ ಚಿತ್ರ 2025 ರ ದಸರಾ ಸಮಯದಲ್ಲಿ ಬಿಡುಗಡೆಯಾಗಲಿದೆ.

ರಾಷ್ಟ್ರ ಪ್ರಶಸ್ತಿ ವಿಜೇತ ಚಲನಚಿತ್ರ ‘ಕಾಂತಾರ’ ನಿರ್ಮಾಪಕರು ಇಂದು ಈ ಬಗ್ಗೆ ಘೋಷಣೆ ಮಾಡಿದ್ದಾರೆ.

‘ಕಾಂತಾರ’ ನಿರ್ಮಾಣ ಸಂಸ್ಥೆಯಾದ ಹೊಂಬಾಳೆ ಫಿಲ್ಮ್ಸ್ ಮುಂಬರುವ ಚಿತ್ರಕ್ಕಾಗಿ ಆಸಕ್ತಿದಾಯಕ ಪೋಸ್ಟರ್ ಅನ್ನು ಹಂಚಿಕೊಂಡಿದೆ.

ಕಾಂತಾರ: ಅಧ್ಯಾಯ 1′ ಅಕ್ಟೋಬರ್ 2, 2025 ರಂದು ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗಲಿದೆ ಎಂದು ಘೋಷಿಸಿದೆ. ಚಿತ್ರವು ಗಾಂಧಿ ಜಯಂತಿ ಮತ್ತು ದಸರಾ ಸಂದರ್ಭದಲ್ಲಿ ಬಿಡುಗಡೆಯಾಗಲಿದೆ.

‘ಕಾಂತಾರ’ ಬಹು ಭಾಷೆಗಳಲ್ಲಿ ಬಿಡುಗಡೆಯಾಗಿ ಭಾರೀ ಯಶಸ್ಸು ಕಂಡಿತ್ತು. ರಿಷಬ್ ಶೆಟ್ಟಿಗೆ ರಾಷ್ಟ್ರ ಪ್ರಶಸ್ತಿ ತಂದುಕೊಟ್ಟಿದೆ.

Leave a Reply

Your email address will not be published. Required fields are marked *

Join WhatsApp Group
error: Content is protected !!