ಬೆಂಗಳೂರು : ದೆಹಲಿಯಲ್ಲಿ ನಂದಿನಿ ಹಾಲು ಮಾರಾಟಕ್ಕೆ ನ.21 ರಂದು ಸಿಎಂ ಸಿದ್ದರಾಮಯ್ಯ ಚಾಲನೆ ನೀಡಲಿದ್ದಾರೆ.
ನಂದಿನಿ ಮಾರಾಟ ಮಳಿಗೆ ದೆಹಲಿಯಲ್ಲಿ ಉದ್ಘಾಟನೆಯಾಗಲಿದ್ದು, ಈ ಮೂಲಕ ಕರ್ನಾಟಕದ ನಂದಿನಿ ಘಮ ರಾಷ್ಟ್ರ ರಾಜಧಾನಿ ದೆಹಲಿಯಲ್ಲೂ ಫಸರಿಸಲಿದೆ.
ನ.21 ರಂದು ದೆಹಲಿಯಲ್ಲಿ ಸಿದ್ದರಾಮಯ್ಯ ಅವರು ನಂದಿನಿ ಹಾಲಿನ ಉತ್ಪನ್ನಗಳ ಮಾರಾಟ ಮಳಿಗೆಯನ್ನು ಉದ್ಘಾಟಿಸಲಿದ್ದಾರೆ.
ಈ ವೇಳೆ ಅವರು ಹೈಕಮಾಂಡ್ ನಾಯಕರನ್ನು ಭೇಟಿಯಾಗುವ ಸಾಧ್ಯತೆಯಿದೆ. ಒಟ್ಟಿನಲ್ಲಿ ದೆಹಲಿಯಲ್ಲೂ ಕೆಎಂಎಫ್ ಹಾಲು, ಮೊಸರು ಮಾರಾಟವಾಗಲಿದೆ.ನಂದಿನಿಯ ಮಾರಾಟ ಮಳಿಗೆ ದೆಹಲಿಯಲ್ಲಿ ಉದ್ಘಾಟನೆಯಾಗಲಿದೆ. ಅಲ್ಲಿಗೆ ಮಂಡ್ಯ ಜಿಲ್ಲಾ ಹಾಲು ಒಕ್ಕೂಟದಿಂದ (ಮನ್ಮುಲ್) ಹಾಲು ಹಾಗೂ ಹಾಲಿನ ಉತ್ಪನ್ನಗಳನ್ನು ಸರಬರಾಜು ಮಾಡಲಾಗುವುದು ಎಂದು ಕೃಷಿ ಸಚಿವರಾದ ಎನ್. ಚಲುವರಾಯಸ್ವಾಮಿ ಇತ್ತೀಚೆಗೆ ತಿಳಿಸಿದ್ದರು. ಈ ಮೂಲಕ ಕರ್ನಾಟಕದ ನಂದಿನಿ ಘಮ ರಾಷ್ಟ್ರ ರಾಜಧಾನಿ ದೆಹಲಿಯಲ್ಲೂ ಫಸರಿಸಲಿದೆ.