ಹಾ ಸನ: ಪತ್ನಿ – ತಾಯಿ ಜಗಳದಿಂದ ಬೇಸತ್ತ ವ್ಯಕ್ತಿಯೊಬ್ಬ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಹಾಸನ ಜಿಲ್ಲೆಯ ಸಕಲೇಶಪುರ ತಾಲೂಕಿನ ಬಾಚೀಹಳ್ಳಿ ಗ್ರಾಮದಲ್ಲಿ ನಡೆದಿದೆ.

ಕರುಣಾಕರ (40) ಮೃತ ವ್ಯಕ್ತಿ. ಕಾಫಿ ಬೆಳೆಗಾರನಾಗಿದ್ದ ಕರುಣಾಕರ ತಾಯಿ ಹಾಗೂ ಪತ್ನಿ ನಡುವೆ ಹೊಂದಾಣಿಕೆ ಇರಲಿಲ್ಲ.

ಇದರಿಂದ ಪ್ರತಿನಿತ್ಯ ಜಗಳವಾಗುತ್ತಿತ್ತು. ಹೀಗಾಗಿ ಕರುಣಾಕರ್‌ ತಾಯಿ ಬೇರೆ ಮನೆಯಲ್ಲಿ ವಾಸವಿದ್ದರು. ಈ ಎಲ್ಲಾ ಕಾರಣದಿಂದ ಕರುಣಾಕರ್‌ ಮನನೊಂದಿದ್ದ.

ಇಂದು ಬೆಳಗ್ಗೆ ಮನೆಯಲ್ಲಿ ಬಂದೂಕಿನಿಂದ ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾನೆ. ಘಟನೆಗೆ ಸಂಬಂಧಿಸಿ ಸ್ಥಳಕ್ಕೆ ಯಸಳೂರು ಪೊಲೀಸ್ ಠಾಣೆಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಸಕಲೇಶಪುರ ಕ್ರಾಫರ್ಡ್ ಆಸ್ಪತ್ರೆಗೆ ರವಾನಿಸಲಾಗಿದೆ.

Leave a Reply

Your email address will not be published. Required fields are marked *

Join WhatsApp Group
error: Content is protected !!