ಉಪ್ಪಿನಂಗಡಿ: ಹಿರೇಬಂಡಾಡಿ ಗ್ರಾ.ಪಂ.ನ ಸಾಮಾನ್ಯ ಸಭೆಯ ವೇಳೆ ಬಿಜೆಪಿ ಬೆಂಬಲಿತ ಸದಸ್ಯರು ಪುತ್ತೂರು ಶಾಸಕರನ್ನು ಏಕವಚನದಲ್ಲಿ ನಿಂದಿಸಿ, ಅವಹೇಳನ ಮಾಡಿದ್ದಲ್ಲದೆ ಕಾಂಗ್ರೆಸ್ ಬೆಂಬಲಿತ ಸದಸ್ಯೆ ಕ್ರಿಯಾಯೋಜನೆಯ ಬಗ್ಗೆ ಮಾತನಾಡಿದಾಗ ಅವರ ಮೇಲೆ ಹಲ್ಲೆಗೆ ಮುಂದಾಗಿರುತ್ತಾರೆ.
ಈ ಬಗ್ಗೆ ಕ್ರಮ ಕೈಗೊಳ್ಳಬೇಕು ಹಾಗೂ ಬಿಜೆಪಿ ಪರ ಕೆಲಸ ಮಾಡುತ್ತಿರುವ ಇಲ್ಲಿನ ಸಿಬ್ಬಂದಿಯನ್ನು ಬೇರೆ ಕಡೆ ವರ್ಗಾವಣೆ ಮಾಡಬೇಕು ಎಂದು ಕಾಂಗ್ರೆಸ್ ಬೆಂಬಲಿತ ಸದಸ್ಯರು ತಾ.ಪಂ. ಕಾರ್ಯನಿರ್ವಹಣಾಧಿಕಾರಿ ಮತ್ತು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿಗೆ ದೂರು ನೀಡಿದ್ದಾರೆ.
ತಾಲೂಕು ಪಂಚಾಯತ್ ಸಿಬ್ಬಂದಿ ಜಯಪ್ರಕಾಶ್ ಅವರ ಮೂಲಕ ದೂರನ್ನು ತಾ.ಪಂ. ಕಾರ್ಯನಿರ್ವಹಣಾಧಿಕಾರಿಗೆ ನೀಡಿದ್ದಾರೆ.