
ಮನೆಯಲ್ಲಿ ನೇಣು ಬಿಗಿದುಕೊಂಡು ಕಾಪರ್ ಏಜ್ ಗ್ರೂಪ್ ಆಫ್ ಇನ್ಸಿಸ್ಟಿಟ್ಯೂಟ್ ಮಾಲೀಕ ಆತ್ಮಹತ್ಯೆ ಮಾಡಿಕೊಂಡ ಘಟನೆ ಎಸ್. ಎಸ್. ಬಡಾವಣೆಯಲ್ಲಿ ನಡೆದಿದೆ.
ಬಿ. ಎನ್. ಶರತ್ (35) ಆತ್ಮಹತ್ಯೆ ಮಾಡಿಕೊಂಡವರು. ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಕೋಚಿಂಗ್ ಸೆಂಟರ್ ಆರಂಭಿಸುವ ಮೂಲಕ ಸಾವಿರಾರು ವಿದ್ಯಾರ್ಥಿಗಳಿಗೆ ಕೋಚಿಂಗ್ ನೀಡುವ ಮೂಲಕ ಮನೆ ಮಾತಾಗಿದ್ದರು.
ದಾವಣಗೆರೆಯ ಪ್ರತಿಷ್ಠಿತ ಬಡಾವಣೆಯಾದ ಎಂಸಿಸಿ ಬಿ ಬ್ಲಾಕ್ ನ ಈಜುಕೊಳ ಸಮೀಪ ಕಾಪರ್ ಏಜ್ ಗ್ರೂಪ್ ಆಫ್ ಇನ್ಸ್ಟಿಟ್ಯೂಟ್ ಸಂಸ್ಥೆ ಕಟ್ಟಿದ್ದರು. ಸಾವಿರಾರು ವಿದ್ಯಾರ್ಥಿಗಳಿಗೆ ತರಬೇತಿ ನೀಡಿ ಜನಪ್ರಿಯತೆ ಗಳಿಸಿದ್ದರು.
ತಂದೆ ಬಿಎಸ್ ಎನ್ ಎಲ್ ನಿವೃತ್ತ ಎಜಿಎಂ ಆಗಿದ್ದ ನಾಗರಾಜ್ ಹಾಗೂ ತಾಯಿ ಜಾನಕಿ ದಂಪತಿ ಪುತ್ರನಾಗಿದ್ದು, ಹಣಕಾಸಿನ ಯಾವುದೇ ತೊಂದರೆ ಇರಲಿಲ್ಲ. ಆದ್ರೆ, ಒಳ್ಳೆಯ ಹುಡುಗ ಎಂಬ ಹೆಸರು ಪಡೆದಿದ್ದರು. ಆದ್ರೆ ಆತ್ಮಹತ್ಯೆ ಮಾಡಿಕೊಂಡಿರುವುದು ಹಲವು ಪ್ರಶ್ನೆಗಳನ್ನು ಹುಟ್ಟುಹಾಕಿದೆ.
ವಿದ್ಯಾನಗರ ಪೊಲೀಸ್ ಠಾಣೆಯ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು.






