ಗುಂಡ್ಯ : ಮಂಗಳೂರು- ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಗುಂಡ್ಯ ಸಮೀಪದ ಅಡ್ಡಹೊಳೆ ಎಂಬಲ್ಲಿ ಬೆಳ್ಳಂಬೆಳಿಗ್ಗೆ ಸರಣಿ ಅಪಘಾತ ನಡೆದಿದ್ದು. 20ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ. ಖಾಸಗಿ ಬಸ್, ಕೆಎಸ್ಸಾರ್ಟಿಸಿ ಬಸ್ ಹಾಗೂ ಕಾರಿನ ನಡುವೆ ಈ ಅಪಘಾತ ಸಂಭವಿಸಿದೆ.

ಬೆಂಗಳೂರು ಮೂಲದ ಕಾಲೇಜು ವಿದ್ಯಾರ್ಥಿಗಳು ಕುಂದಾಪುರಕ್ಕೆ ಪ್ರವಾಸಕ್ಕೆಂದು ತೆರಳಿ ಹಿಂತಿರುಗುತ್ತಿದ್ದ ವೇಳೆ ದುರ್ಘಟನೆ ನಡೆದಿದೆ. ಚಾಲಕನ ನಿಯಂತ್ರಣ ತಪ್ಪಿದ ಖಾಸಗಿ ಬಸ್‌ ಪಲ್ಟಿಯಾಗಿ ಕೆಎಸ್ಸಾರ್ಟಿಸಿ ಬಸ್ ಗೆ ಢಿಕ್ಕಿ ಹೊಡೆದಿದೆ. ಇದೆ ವೇಳೆ ಹಿಂದಿನಿಂದ ಬರುತ್ತಿದ್ದ ಕಾರೊಂದು ಕೆಎಸ್ಸಾರ್ಟಿಸಿ ಬಸ್ ಗೆ ಢಿಕ್ಕಿ ಹೊಡೆದು ಸರಣಿ ಅಪಘಾತ ನಡೆದಿದೆ .

ಅಪಘಾತದಲ್ಲಿ ಸುಮಾರು ಇಪ್ಪತ್ತಕ್ಕೂ ಹೆಚ್ಚು ಮಂದಿಗೆ ಗಾಯಗೊಡಿದ್ದಾರೆ. ಗಾಯಾಳುಗಳಿಗೆ ನೆಲ್ಯಾಡಿ ಮತ್ತು ಕಡಬದ ಖಾಸಗಿ ಆಸ್ಪತ್ರೆಗಳಲ್ಲಿ ಪ್ರಾಥಮಿಕ ಚಿಕಿತ್ಸೆ ನೀಡಲಾಗಿದೆ. ಹಲವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಪುತ್ತೂರಿಗೆ ರವಾನಿಸಲಾಗಿದೆ. ಅಪಘಾತವು ಉಪ್ಪಿನಂಗಡಿ ಪೋಲಿಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ

Leave a Reply

Your email address will not be published. Required fields are marked *

Join WhatsApp Group
error: Content is protected !!